ಸೋಮವಾರಪೇಟೆ, ಆ. ೨೬: ಸೋಮವಾರಪೇಟೆ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಆರ್. ರತ್ನಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಟಿ.ವಿ. ಶೈಲಾ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿದ್ದ ಡಿ.ಪಿ. ಧರ್ಮಪ್ಪ ಅವರು ಮೈಸೂರು ಜಿಲ್ಲೆಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ನೂತನ ಪದಾಧಿಕಾರಿ ಗಳನ್ನು ನೇಮಿಸಲಾಯಿತು.
ಶಿಕ್ಷಕ ಕೆ.ಆರ್. ರತ್ನಕುಮಾರ್, ಈ ಮೊದಲು ಸಂಘದ ಕಾರ್ಯದರ್ಶಿಯಾಗಿ ಹಾಗೂ ಶಿಕ್ಷಕಿ ಟಿ.ವಿ. ಶೈಲಾ ಸಂಘದ ಖಜಾಂಚಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ. ಹೇಮಂತ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಜೆ. ಕುಮಾರ್, ಖಜಾಂಚಿ ಎ.ಸಿ. ಮಂಜುನಾಥ್, ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಪದಾಧಿಕಾರಿ ಪ್ರಕಾಶ್, ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ ಪಿ. ನವೀನ್ ಕುಮಾರ್, ಪದಾಧಿಕಾರಿಗಳಾದ ಕೆ.ಪಿ. ಜಯಕುಮಾರ್, ಯಶವಂತ್, ಶ್ರೀಕಾಂತ್, ಪೂವಯ್ಯ, ಬಿ.ಪಿ. ಸವಿತಾ, ರಜನಿ, ಶಿವಕುಮಾರಿ, ಶಿವಣ್ಣ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.