ಮಡಿಕೇರಿ, ಆ. ೨೫: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಆಗ್ರಹಿಸಿ ನಗರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ಸರಕಾರ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ, ಮಡಿಕೇರಿ ಬ್ಲಾಕ್ ಹಾಗೂ ಮಡಿಕೇರಿ ನಗರ ಯುವ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ನಗರ ಯುವ ಕಾಂಗ್ರೆಸ್ ಅಧ್ಯಕ್ಷ ದರ್ಶನ್ ಪೆಮ್ಮಯ್ಯ ಮಾತನಾಡಿ, ಸೌಜನ್ಯ ಪ್ರಕರಣದ ಆರೋಪಿ ಇದೀಗ ನಿರಪರಾಧಿಯಾಗಿ ಬಿಡುಗಡೆಗೊಂಡಿದ್ದು, ಈ ಪ್ರಕರಣದ ಹಿಂದಿನ ನೈಜ ಆರೋಪಿಗಳನ್ನು ಬಂಧಿಸಬೇಕು. ಈ ನಿಟ್ಟಿನಲ್ಲಿ ಮರು ತನಿಖೆಯಾಗಬೇಕೆಂದು ಒತ್ತಾಯಿಸಿದರು.
ಜಿಲ್ಲಾ ವಕ್ತಾರ ತೆನ್ನೀರ ಮೈನಾ ಮಾತನಾಡಿ, ಈ ಪ್ರಕರಣದಲ್ಲಿ ನಿರಪರಾಧಿಯನ್ನು ಸಿಲುಕಿಸುವ ಯತ್ನವಾಗಿದೆ. ಈ ಹಿಂದಿನ ಬಿಜೆಪಿ ಸರಕಾರ ಸರಿಯಾದ ತನಿಖೆ ನಡೆಸಿಲ್ಲ. ಪೊಲೀಸರ ವರದಿಯನ್ನು ಸಿಐಡಿ ಪುಷ್ಠೀಕರಿಸಿದೆ. ಸಿಬಿಐ ತನಿಖೆಗೆ ಸಾಕ್ಷಾö್ಯಧಾರಗಳ ಕೊರತೆ ಉಂಟಾಗಿ ಪ್ರಕರಣಕ್ಕೆ ಹಿನ್ನಡೆ ಉಂಟಾಗಿದೆ. ಈ ಹಿನ್ನೆಲೆ ಸೂಕ್ತ ತನಿಖೆಗೆ ಆಗ್ರಹಿಸಿದರು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಉಪಾಧ್ಯಕ್ಷ ಮಂಡೀರ ಸದಾ ಮುದ್ದಪ್ಪ, ಯಾಕೂಬ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.