ಮಡಿಕೇರಿ, ಆ. ೨೬: ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ, ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದೊಂದಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಉತ್ತಮ ಶಿಕ್ಷಕರಿಗೆ ಪ್ರೇರಣಾ ದಿನದ ಅಂಗವಾಗಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಭೌತಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಆಗಿರುವ ಪ್ರೊ. ನಾಗರಾಜ ಕೆ.ಪಿ. ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಪದಕಲ್ಲು ಗ್ರಾಮದ ಕೋಡಿ ಮುತ್ತಮ್ಮ ಹಾಗೂ ದಿ. ಪೊನ್ನಪ್ಪನವರ ಪುತ್ರ.