ಕೂಡಿಗೆ, ಆ. ೨೫: ಕೂಡು ಮಂಗಳೂರು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮದ ದೇವಾಲಯ ಸಮಿತಿಯ ಆಶ್ರಯದಲ್ಲಿ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್. ರಾಜಾಚಾರಿ ಅವರ ಗದ್ದೆಯಲ್ಲಿ ಎರಡನೇ ವರ್ಷದ ಜನಪದಶೈಲಿಯ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟ ಜರುಗಿತು.
ಶಾಲೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್, ರಾಷ್ಟಿçÃಯ ಸೇವಾ ಯೋಜನಾ (ಎನ್.ಎಸ್. ಎಸ್.) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಶಾಲಾ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಹಾಗೂ ಗ್ರಾಮದ ಬಸವೇಶ್ವರ ಹಾಗೂ ದೊಡ್ಡಮ್ಮ ದೇವಾಲಯ ಸಮಿತಿ, ಸುಂಟಿಕೊಪ್ಪ ಜೆ.ಸಿ.ಐ. ಸಂಸ್ಥೆ ಹಾಗೂ ಕುಶಾಲನಗರ ಕಾವೇರಿ ಜೆ.ಸಿ.ಐ. ಸಂಸ್ಥೆಯ ಸಂಯುಕ್ತ ಆಶ್ರಯ ದಲ್ಲಿ ಗೋ ಗ್ರೀನ್ ಅಭಿಯಾನದ ಅಂಗವಾಗಿ ಏರ್ಪಡಿಸಿದ್ದ ಕೆಸರುಗದ್ದೆ ಕ್ರೀಡಾಕೂಟ ಜನರ ಗಮನ ಸೆಳೆಯಿತು.
ಕ್ರೀಡಾಕೂಟದಲ್ಲಿ ಶಾಲಾ ವಿದ್ಯಾರ್ಥಿಗಳು ಕೆಸರು ಗದ್ದೆಯಲ್ಲಿ ಬಿದ್ದೆದ್ದು ಆಟವಾಡುತ್ತಾ ಕುಣಿದು ಕುಪ್ಪಳಿಸಿ ಸಂತಸಪಟ್ಟರು. ಕೆಸರು ಗದ್ದೆಯಲ್ಲಿ ಮಕ್ಕಳ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ, ಬಾಯಲ್ಲಿ ಚಮಚದ ಮೇಲೆ ನಿಂಬೆ ಹಣ್ಣು ಇಟ್ಟು ಓಡುವುದು ಹಾಗೂ ತಲೆಯ ಮೇಲೆ ನೀರಿನ ಬಾಟಲ್ ಅನ್ನು ಇಟ್ಟುಕೊಂಡು ಓಡುವ ಸ್ಪರ್ಧೆ ಸೇರಿದಂತೆ ಇನ್ನಿತರ ಕ್ರೀಡಾ ಸ್ಪರ್ಧೆಗಳಲ್ಲಿ ಮಕ್ಕಳು ಸಕ್ರಿಯ ವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು ಗಮನ ಸೆಳೆಯಿತು.
ಗದ್ದೆಯಲ್ಲಿ ಕೆಸರು ಮೆದ್ದಿಕೊಂಡು ಹಗ್ಗ ಜಗ್ಗಾಟದಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ತಮ್ಮ ತಂಡವು ಗೆಲ್ಲಬೇಕೆಂಬ ಹರಸಾಹಸದಿಂದ ತಮ್ಮ ಬಲವನ್ನು ಪ್ರದರ್ಶಿಸುತ್ತಿದ್ದುದು ಕಂಡುಬAತು. ಕೆಸರು ಗದ್ದೆ ಕ್ರೀಡಾಕೂಟದ ಮಹತ್ವದ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋ ಪಾಧ್ಯಾಯರೂ ಆದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಜನಪದ ಶೈಲಿಯ ಗ್ರಾಮೀಣ ಕೆಸರುಗದ್ದೆ ಕ್ರೀಡಾ ಕೂಟವನ್ನು ವಿದ್ಯಾರ್ಥಿಗಳಲ್ಲಿ ರೈತರ ಕೃಷಿ ಬದುಕಿ ನೊಂದಿಗೆ ರೈತರ ಜೀವನದ ಕಷ್ಟ ಸುಖಗಳನ್ನು ಅರ್ಥ ಮಾಡಿಕೊಳ್ಳುವ ದಿಸೆಯಲ್ಲಿ ಸಂಘಟಿಸಲಾಗಿದೆ ಎಂದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ ಮಾತನಾಡಿ, ನಮ್ಮ ಶಾಲಾ ಶಿಕ್ಷಕರ ತಂಡದ ಪ್ರೇರೇಪಣೆ ಹಾಗೂ ಗ್ರಾಮಸ್ಥರ ಸಹಕಾರದಿಂದ ಇಂತಹ ಕ್ರೀಡಾಕೂಟ ಸಂಘಟಿಸುವ ಮೂಲಕ ಮಕ್ಕಳಿಗೆ ಕೃಷಿ ಪಾಠದ ಮಹತ್ವ ತಿಳಿಸುತ್ತಿರುವುದು ಶ್ಲಾಘನೀಯವಾದುದು ಎಂದರು.
ಪ್ರಗತಿಪರ ರೈತ ಕೆ.ಎಸ್. ರಾಜಾಚಾರಿ ಮಾತನಾಡಿ, ಪೂರ್ವಜರ ಕಾಲದಿಂದ ಬಂದಿರುವ ಇಂತಹ ದೇಸಿ ಕ್ರೀಡೆಗಳನ್ನು ಪರಿಚಯಿಸುವ ಕಾರ್ಯವನ್ನು ಶಾಲಾ ಮುಖ್ಯೋಪಾ ಧ್ಯಾಯ ಟಿ.ಜಿ. ಪ್ರೇಮಕುಮಾರ್ ಮತ್ತು ಶಿಕ್ಷಕರ ತಂಡವು ಮಾಡಲಾಗುತ್ತಿದೆ. ದೇಸಿ ಕ್ರೀಡೆ ಉಳಿಸಿ-ಬೆಳೆಸುವ ಉದ್ದೇಶ ನಮ್ಮದು ಎಂದರು.
ಕುಶಾಲನಗರ ಕಾವೇರಿ ಜೆ.ಸಿ.ಐ. ಸಂಸ್ಥೆಯ ಅಧ್ಯಕ್ಷ ಎಂ.ಜೆ. ರಜನಿಕಾಂತ್ ಮಾತನಾಡಿ, ಕೆಸರುಗದ್ದೆಯಲ್ಲಿ ಮಕ್ಕಳ ಸಂಭ್ರಮವು ರೈತರ ಗಮನ ಸೆಳೆದಿರುವುದು ಹೆಮ್ಮೆಯ ಸಂಗತಿ ಎಂದರು.
ಗದ್ದೆಯಲ್ಲಿ ಮಕ್ಕಳೊಂದಿಗೆ ತೊಡಗಿಸಿಕೊಂಡಿದ್ದ ಜಿಲ್ಲಾ ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸುಲೋಚನಾ ಮಾತನಾಡಿ, ಆಧುನಿಕ ಯುಗದಲ್ಲಿ ನಶಿಸುತ್ತಿರುವ ದೇಸಿ ಕ್ರೀಡೆಗಳನ್ನು ಉಳಿಸಿ-ಬೆಳೆಸಬೇಕಾಗಿದೆ ಎಂದರು.
ಕ್ರೀಡಾಕೂಟದಲ್ಲಿ ಕೂಡಿಗೆ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಬಿ.ಡಿ. ರಮ್ಯ, ಎಸ್.ಎಂ. ಗೀತಾ, ಬಿ.ಎನ್. ಸುಜಾತ, ಅನ್ಸಿಲಾ ದೈಹಿಕ ಶಿಕ್ಷಕ ಶಿವಕುಮಾರ್, ರೇಖಾ, ಕೃಷಿಕ ಕೆ.ಆರ್. ನಾಗರಾಜು, ಗ್ರಾಮಸ್ಥರಾದ ಯಮುನ, ಗುರು, ಮುರುಳಿ ಇತರರು ಇದ್ದರು.