ತಮಿಳುನಾಡು ರೈಲು ಬೆಂಕಿ ದುರಂತ
ಚೆನ್ನೆöÊ, ಆ. ೨೬: ತಮಿಳುನಾಡಿನಲ್ಲಿ ಸಂಭವಿಸಿದ ರೈಲು ಬೆಂಕಿ ದುರಂತಕ್ಕೆ ಸಂಬAಧಿಸಿದAತೆ ಸಿಎಂ ಎಂ.ಕೆ. ಸ್ಚಾಲಿನ್ ಸಂತ್ರತ್ತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ. ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ ೧೦ ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರೆ, ೨೦ ಗಾಯಗೊಂಡಿದ್ದರು. ಲಖನೌ–ರಾಮೇಶ್ವರಂ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಮುಂಜಾನೆ ೫.೧೫ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ೫೫ ಪ್ರಯಾಣಿಕರು ಇದ್ದ ಆ ಬೋಗಿಯನ್ನು ನಾಗರಕೋಯಿಲ್ ಬಳಿ ರೈಲಿಗೆ ಅಳವಡಿಸಲಾಗಿತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ಬೋಗಿಯಲ್ಲಿ ಅಕ್ರಮವಾಗಿ ಅಡುಗೆ ಸಿಲಿಂಡರ್ಗಳನ್ನು ಸಾಗಿಸಲಾಗುತ್ತಿತ್ತು. ಟೀ ಕಾಯಿಸುವಾಗ ಅವಘಡ ಸಂಭವಿಸಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನು ದುರಂತಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ದುರಂತದ ಸಂತ್ರಸ್ತರ ಕುಟುಂಬಕ್ಕೆ ತಲಾ ೩ ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ವಿಚ್ಛೇದನ ಸಾಧ್ಯವಿಲ್ಲ ಎಂದ ಹೈಕೋರ್ಟ್!
ಪಾಟ್ನ, ಆ. ೨೬: ಪತ್ನಿಯ ವಿರುದ್ಧ ಕ್ರೂರತನದ ಆರೋಪ ಹೊರಿಸಿ ಸ್ಥಳೀಯ ಆರ್ಎಸ್ಎಸ್ ಕಚೇರಿಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಗೆ ಕೆಳ ಹಂತದ ನ್ಯಾಯಾಲಯ ನೀಡಿದ್ದ ವಿಚ್ಛೇದನವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾ.ಪಿಬಿ ಬಜಂತ್ರಿ ಹಾಗೂ ನ್ಯಾ. ಜಿತೇಂದ್ರ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ನೀಡಿದೆ. ೦೭.೧೦.೨೦೧೭ ರಂದು ನಳಂದ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯ ದಂಪತಿಗೆ ವಿಚ್ಛೇದನ ನೀಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ನಿಶಾ ಗುಪ್ತಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿದ ಹೈಕೋರ್ಟ್, ನಳಂದ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ತಡೆ ಹಿಡಿದಿದೆ. ಉದಯ್ ಚಂದ್ ಗುಪ್ತಾ ಎಂಬ ವ್ಯಕ್ತಿಗೆ ನೀಡಲಾಗಿರುವ ವಿಚ್ಛೇದನ ಕಾನೂನಿನ ದೃಷ್ಟಿಯಿಂದ ಊರ್ಜಿತವಾಗುವುದಿಲ್ಲ. ಏಕೆಂದರೆ ಉದಯ್ ಚಂದ್ ಗುಪ್ತಾ ವಿಚ್ಛೇದನ ಪಡೆಯುವುದಕ್ಕೆ ನೀಡಿದ್ದ, ಪತ್ನಿ ಕ್ರೂರಿ ಎಂಬ ಕಾರಣವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ.
ಮಂಗಳೂರು: ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ
ಮಂಗಳೂರು, ಆ. ೨೬: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಸಮುದಾಯದ ವಿದ್ಯಾರ್ಥಿಗಳು ಥಳಿಸಿದ್ದಾರೆ. ಮಂಗಳೂರಿನ ಕಾಲೇಜುವೊಂದರಲ್ಲಿ ಕಾಸರಗೋಡು ಜಿಲ್ಲೆಯ ಉಪ್ಪಳದ ೧೮ ವರ್ಷದ ಇಬ್ರಾಹಿಂ ಫಾಹಿಂ ವ್ಯಾಸಂಗ ಮಾಡುತ್ತಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ಅನಾನ್, ತಬೀಶ್ ಸೇರಿ ಹಲವರು ಇಬ್ರಾಹಿಂನನ್ನು ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲಾö್ಯಟ್ಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಈ ಸಂಬAಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಬ್ರಾಹಿಂ ಮೇಲೆ ಬೆಲ್ಟ್ನಿಂದ ಹಲ್ಲೆ ಮಾಡಿದ್ದು ತೀವ್ರವಾಗಿ ಗಾಯಗೊಂಡಿರುವ ಆತನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ತಿ ಚಿದಂಬರA ವಿದೇಶ ಪ್ರವಾಸಕ್ಕೆ ದೆಹಲಿ ಕೋರ್ಟ್ ಅಸ್ತು
ನವದೆಹಲಿ, ಆ. ೨೬: ಏರ್ಸೆಲ್-ಮ್ಯಾಕ್ಸಿಸ್ ಮತ್ತು ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ, ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರA ಅವರಿಗೆ ಸೆಪ್ಟೆಂಬರ್ ೧೫ ರಿಂದ ೨೭ ರವರೆಗೆ ಫ್ರಾನ್ಸ್ ಮತ್ತು ಬ್ರಿಟನ್ಗೆ ಪ್ರಯಾಣಿಸಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಅನುಮತಿ ನೀಡಿದೆ. ಶಿವಗಂಗಾ ಸಂಸದ ಕಾರ್ತಿ ಚಿದಂಬರA ಅವರು ಕೋರ್ಟ್ ಅನುಮತಿ ಪಡೆದು ಈಗಾಗಲೇ ಕೆಲವು ಬಾರಿ ವಿದೇಶ ಪ್ರವಾಸಕ್ಕೆ ಹೋಗಿ ಬಂದಿದ್ದಾರೆ. ವಿದೇಶ ಪ್ರವಾಸದ ವೇಳೆ ಆರೋಪಿ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿಲ್ಲ ಎಂಬುದನ್ನು ಗಮನಿಸಿದ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ಕಾರ್ತಿ ಚಿದಂಬರA ಅವರ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ್ದಾರೆ.