ಕುಶಾಲನಗರ, ಆ. ೨೭: ಕುಶಾಲನಗರ ಗಡಿಭಾಗದ ಹೆದ್ದಾರಿಯಲ್ಲಿ ಕರ್ತವ್ಯನಿರತ ಸಂಚಾರಿ ಪೊಲೀಸ್ಗೆ ಬೈಕ್ ಡಿಕ್ಕಿಯಾದ ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರದ ಎರಡು ಠಾಣೆಗಳಲ್ಲಿ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ.
ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ರಿಜ್ವಾನ್ ಎಂಬಾತನ ಮೇಲೆ ಮೊಕದ್ದಮೆ ದಾಖಲಾಗಿದ್ದು, ಬೈಕ್ನ್ನು ವಶಪಡಿಸಿಕೊಳ್ಳಲಾಗಿದೆ.
ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದ ಸಂದರ್ಭ ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ನುಗ್ಗಿ ದಾಂಧಲೆ ಎಬ್ಬಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ದಂಡಿನಪೇಟೆಯ ಹಲವರ ಮೇಲೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಅಪಘಾತದಿಂದ ತೀವ್ರ ಗಾಯ ಗೊಂಡಿರುವ ಸಂಚಾರಿ ಪೊಲೀಸ್ ಶಶಿಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಆಸ್ಪತ್ರೆಯಿಂದ ಮೈಸೂರಿಗೆ ಸಾಗಿಸಲಾಗಿದೆ ಎಂದು ಡಿ ವೈ ಎಸ್ ಪಿ ಗಂಗಾಧರಪ್ಪ ಮಾಹಿತಿ ನೀಡಿದ್ದಾರೆ.
ಕುಶಾಲನಗರ ಕೊಪ್ಪ ಗಡಿಭಾಗದ ಅರಣ್ಯ ತಪಾಸಣಾ ಗೇಟ್ ಬಳಿ ಶನಿವಾರ ರಾತ್ರಿ ೯ ಗಂಟೆ ವೇಳೆಗೆ ವಾಹನಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದ ಸಂದರ್ಭ ದಂಡಿನಪೇಟೆಯ ರಿಜ್ವಾನ್ ಎಂಬಾತ ತನ್ನ ಬೈಕ್ನಲ್ಲಿ ವೇಗವಾಗಿ ಬಂದು ಪೊಲೀಸ್ ಸಿಬ್ಬಂದಿಗೆ ಡಿಕ್ಕಿಪಡಿಸಿದ್ದು, ತಲೆಭಾಗ, ಮುಖ ಮತ್ತು ಕೈ ಕಾಲುಗಳಿಗೆ ತೀವ್ರತರದ ಗಾಯ ಉಂಟಾಗಿದೆ. ಈ ಘಟನೆ ನಂತರ ಕುಶಾಲನಗರ ಸರಕಾರಿ ಆರೋಗ್ಯ ಕೇಂದ್ರದಲ್ಲಿ ರಾತ್ರಿ ೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಹತ್ತು ಗಂಟೆಗೆ ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಬೈಕ್ ಸವಾರನ ಕಡೆಯ ಕೆಲವು ವ್ಯಕ್ತಿಗಳು ಆಸ್ಪತ್ರೆಗೆ ನುಗ್ಗಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿ ಮೇಲೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಮಾಹಿತಿ ದೊರೆತ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಯಶವಂತ್ ಕುಮಾರ್, ಪಟ್ಟಣ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಆಸ್ಪತ್ರೆಗೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು.