ಕೂಡಿಗೆ, ಆ. ೨೭: ಸಾರ್ವಜನಿಕ ಶಿಕ್ಷಣ ಇಲಾಖೆ, ಕೂಡ್ಲೂರು ಯೂನಿಕ್ ಅಕಾಡೆಮಿ ಸ್ಕೂಲ್ ಆಶ್ರಯದಲ್ಲಿ ಕೂಡಿಗೆಯ ಕ್ರೀಡಾ ಶಾಲಾ ಮೈದಾನದಲ್ಲಿ ನಡೆದ ಕುಶಾಲನಗರ ‘ಎ' ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಮೂಕಾಂಬಿಕಾ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಅಲ್ಲದೆ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಮೂಕಾಂಬಿಕಾ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ..
ದೈಹಿಕ ಶಿಕ್ಷಣ ಶಿಕ್ಷಕ ಪ್ರತಾಪ್ ಟಿ.ಎನ್., ತರಬೇತುದಾರರಾದ ಆದಂ ಎಸ್., ಶಾರೂಕ್ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು.