ಸೋಮವಾರಪೇಟೆ, ಆ. ೨೭: ಶೋಷಿತ ಸಮುದಾಯದ ಬೆಳವಣಿಗೆಗೆ ಸದಾ ಶ್ರಮಿಸುತ್ತಿದ್ದ, ಉಳುವವನೇ ಭೂಮಿಯ ಒಡೆಯನೆಂದು ಜಗಜ್ಜಾಹೀರು ಮಾಡಿ, ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಡಿ. ದೇವರಾಜ ಅರಸು ಬಡವರ ಕಣ್ಮಣಿ ಆಗಿದ್ದರು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಲೋಕೇಶ್ ಹೇಳಿದರು.

ತಾಲೂಕು ಆಡಳಿತ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ೧೦೮ನೇ ಜನ್ಮ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸಿ ಮೇಲೆತ್ತಲು ಶ್ರಮಿಸಿದ ಕೀರ್ತಿ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದರು.

ಶ್ರಮಿಸಿ ಅರಸು ಅವರು ಸಾಮಾಜಿಕ ನ್ಯಾಯಕ್ಕೆ ಭದ್ರಬುನಾದಿ ಹಾಕಿದರು. ಅವರು ಸರ್ವರಿಗೂ ಸಮಬಾಳು-ಸಮಪಾಲು ನೀಡಲು ಪ್ರಯತ್ನಿಸಿದರು ಎಂದು ನುಡಿದರು.

ವೇದಿಕೆಯಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ಕಾರ್ಯಕ್ರಮದಲ್ಲಿ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ದೇವರಾಜ ಅರಸು ಜೀವನ ಕುರಿತು ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.