ಸೋಮವಾರಪೇಟೆ, ಆ. ೨೬: ನಿನ್ನೆ ದಿನ ಕಾಡಾನೆ ಧಾಳಿಗೆ ಸಿಲುಕಿ ಮೃತಪಟ್ಟ ಆಡಿನಾಡೂರು ಗ್ರಾಮದ ಕೃಷಿಕ ಬಾಣಗೇರಿ ಈರಪ್ಪ ಅವರ ಮನೆಗೆ ಶಾಸಕ ಡಾ. ಮಂಥರ್ ಗೌಡ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು. ಇದೇ ಸಂದರ್ಭ ಕಾಡಾನೆಗಳ ಹಾವಳಿ ತಡೆಗೆ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.