ಶನಿವಾರಸಂತೆ, ಆ. ೨೭: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಬಳೂರು ಗ್ರಾಮಕ್ಕೆ ಪ್ರಥಮ ಬಾರಿಗೆ ಸರ್ಕಾರಿ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಿದ ಹಿನ್ನಲೆಯಲ್ಲಿ ಬೆಂಬಳೂರು ಗ್ರಾಮದ ಮುಖ್ಯ ವೃತ್ತದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಕಾಂಗ್ರೆಸ್ ಮುಖಂಡ ವೆಂಕಟೇಶ್ ಅವರ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಮಹಿಳೆಯರು ಬಸ್ ಗೆ ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿ ದರು. ಚಾಲಕ ಹಾಗೂ ನಿರ್ವಾಹಕ ರನ್ನು ಸ್ವಾಗತಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಇತ್ತೀಚೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಬ್ಯಾಡ ಗೊಟ್ಟ ಗ್ರಾಮ ಪಂಚಾಯಿತಿ ಕಚೇರಿ ಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭ ಬೆಂಬಳೂರು ಗ್ರಾಮಸ್ಥರು ಸರ್ಕಾರಿ ಬಸ್ ಸೇವೆ ಆರಂಭಿಸುವAತೆ ಮನವಿ ಸಲ್ಲಿಸಿದ್ದರು. ಶಾಸಕರ ನಿರ್ದೇಶನದಂತೆ ಬೆಳಿಗ್ಗೆ ಮಡಿಕೇರಿಗೆ ತೆರಳುವ ಬೇಲೂರು- ಮಡಿಕೇರಿ ಬಸ್ ಇದೀಗ ಬೆಂಬ ಳೂರು ಗ್ರಾಮದ ಮೂಲಕ ಶನಿವಾರ ಸಂತೆ ಮಾರ್ಗವಾಗಿ ಸಂಚರಿಸುತ್ತಿದೆ.