ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೪-೨೫ ನೇ ಸಾಲಿಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ ೩೧, ೨೦೨೩ರವರೆಗೆ ವಿಸ್ತರಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ ಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು hಣಣಠಿs:/ ಟಿಚಿvoಜಚಿಥಿಚಿ.gov.iಟಿ ನಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್ ಲೋಡ್ ಮಾಡಬಹುದಾಗಿದೆ. ಅಲ್ಲದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಎರಡು ದಿನಗಳ ಬಳಿಕ ಈಗಾಗಲೇ ಸಲ್ಲಿಸಿದ ಅರ್ಜಿಯಲ್ಲಿ ಏನಾದರೂ ಅಂದರೆ ಅಭ್ಯರ್ಥಿಯ ಲಿಂಗ, ಜಾತಿ, ಪರೀಕ್ಷಾ ಮಾಧ್ಯಮ ಹಾಗೂ ಇತರ ಅಂಶಗಳಲ್ಲಿ ತಿದ್ದುಪಡಿ ಮಾಡಬೇಕಿದ್ದಲ್ಲಿ ಅವಕಾಶ ನೀಡಲಾಗಿದ್ದು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಲು ಪ್ರಕಟಣೆ ತಿಳಿಸಿದೆ.