ವೀರಾಜಪೇಟೆ, ಆ. ೨೮: ವೀರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ಬಿಟ್ಟಂಗಾಲ ಗ್ರಾಮದ ಅಂಬಟ್ಟಿಯಲ್ಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ತಾ. ೩೧ ರಂದು ಬೆಳಿಗ್ಗೆ ೮ ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಗುವುದು ಎಂದು ಬಿಲ್ಲವ ಸೇವಾ ಸಂಘದ ತಾಲೂಕು ಅಧ್ಯಕ್ಷ ಬಿ.ಎಂ.ಗಣೇಶ್ ತಿಳಿಸಿದರು.
ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು, ಬ್ರಹ್ಮಶ್ರಿ ನಾರಾಯಣ ಗುರು ಜಯಂತಿ ಆಚರಣೆ ಸಂದರ್ಭ ಮುಖ್ಯ ಅತಿಥಿಗಳಾಗಿ ವೀರಾಜಪೇಟೆಯ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆದ ಎ.ಎಸ್. ಪೊನ್ನಣ್ಣ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಸುಜಾ ಕುಶಾಲಪ್ಪ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಶಾಸಕದ್ವಯರನ್ನು ಸಂಘದ ವತಿಯಿಂದ ಸನ್ಮಾನಿಸಲಾಗುತ್ತದೆ. ಮತ್ತು ಜನಾಂಗ ಬಾಂಧವರಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೮೦ಕ್ಕಿಂತಲೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.
ಸಂಘದಲ್ಲಿ ಈಗಾಗಲೇ ಸಂಘದ ಸದಸ್ಯರಿಗೆ ಮರಣ ನಿಧಿಯನ್ನು ಸ್ಥಾಪಿಸಲಾಗಿದ್ದು ಮರಣನಿಧಿಗೆ ಸಂಬAಧಿಸಿದAತೆ ಸದಸ್ಯರುಗಳು ಆದಷ್ಟು ಬೇಗ ತಮ್ಮ ಸದಸ್ಯತ್ವವನ್ನು ನವೀಕರಣಗೊಳಿಸುವಂತೆ ತಿಳಿಸಿದರು.