ಸೂರ್ಯಯಾನಕ್ಕೆ ಮುಹೂರ್ತ ನಿಗದಿ : ಸೆಪ್ಟೆಂಬರ್ ೨ರಂದು ಆದಿತ್ಯಾ ಎಲ್ ೧ ಉಡಾವಣೆ: ಇಸ್ರೋ
ಬೆಂಗಳೂರು, ಆ. ೨೮: ಚಂದ್ರಯಾನ-೩ ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೇ ಹುರುಪಿನಲ್ಲೇ ತನ್ನ ಬಹು ನಿರೀಕ್ಷಿತ ಸೂರ್ಯಯಾನ ಯೋಜನೆ ಉಡಾವಣೆಗೆ ಮುಹೂರ್ತ ನಿಗದಿ ಮಾಡಿದೆ. ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ ೧ ಗಗನನೌಕೆಯನ್ನು ಸೆಪ್ಟೆಂಬರ್ ೨ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಮಾಹಿತಿ ನೀಡಿದೆ. ಸೆಪ್ಟೆಂಬರ್ ೨ ಶನಿವಾರ ಬೆಳಗ್ಗೆ ೧೧:೫೦ಕ್ಕೆ PSಐಗಿ-ಅ೫೭ ಉಡಾವಣಾ ನೌಕೆಯ ಮೂಲಕ ಆದಿತ್ಯಾ ಎಲ್ ೧ ಉಪಗ್ರಹವನ್ನು ಉಡಾವಣೆ ಮಾಡಲಾಗುತ್ತದೆ. ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿAದ ಈ ಉಡಾವಣೆ ನಡೆಯಲಿದೆ ಎಂದು ಇಸ್ರೋ ತಿಳಿಸಿದೆ.
ಬಸ್ - ಕಾರಿನ ನಡುವೆ ಡಿಕ್ಕಿ: ಆರು ಮಂದಿ ದುರ್ಮರಣ
ಕನಕಪುರ, ಆ. ೨೮: ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಎ೦೧ಎಂಎಫ್ ೮೦೫೫ ಸಂಖ್ಯೆಯ ಟೊಯೊಟೊ ಕ್ವಾಲಿಸ್ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಕ್ರೇನ್ ಮೂಲಕ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದೆ.
೫.೮೭ ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇಡಿ!
ಬೆಂಗಳೂರು, ಆ. ೨೮: ಅಕ್ರಮ ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ಜಾರಿ ನಿರ್ದೇಶನಾಲಯ(ಇಡಿ) ನಿರ್ಣಾಯಕ ಕ್ರಮ ಕೈಗೊಂಡಿದ್ದು, ೫.೮೭ ಕೋಟಿ ಮೌಲ್ಯದ ಚಿರಾಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ. ಈ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಮತ್ತು ಘಟಕಗಳ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಈ ಆಸ್ತಿಗಳನ್ನು ೨೦೦೨ರ ಮನಿ ಲಾಂಡರಿAಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬ್ಯಾಲೆನ್ಸ್ ಎಂದು ಗುರುತಿಸಲಾಗುತ್ತದೆ. ವಿವೇಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಬಳಿಕ ಇಡಿ ತನಿಖೆ ಆರಂಭಿಸಿತ್ತು. ಅಕ್ರಮ ಆನ್ಲೈನ್ ಜೂಜಾಟ, ಬೆಟ್ಟಿಂಗ್ ಮತ್ತು ಸಂಶಯಾಸ್ಪದ ಚಟುವಟಿಕೆಗಳಲ್ಲಿ ಹಲವಾರು ಕಂಪನಿಗಳು ಆಳವಾಗಿ ತೊಡಗಿಸಿಕೊಂಡಿವೆ ಎಂದು ಆರೋಪಿಸಿ ಡೈರೆಕ್ಟರೇಟ್ ಜನರಲ್ ಆಫ್ ಸರಕು ಮತ್ತು ಸೇವಾ ತೆರಿಗೆ ಗುಪ್ತಚರ (ಡಿಜಿಜಿಐ) ಕಚೇರಿಯು ದೂರು ದಾಖಲಿಸಿದೆ. ಆರೋಪಿಗಳನ್ನು ಉಮರ್ ಫಾರೂಕ್ ಮತ್ತು ಶ್ಯಾಮಲಾ ಎನ್ ಎಂದು ಗುರುತಿಸಲಾಗಿದ್ದು, ಹಲವು ಕಂಪನಿಗಳನ್ನು ಸ್ಥಾಪಿಸಲು ಸುಳ್ಳು ದಾಖಲೆಗಳನ್ನು ಬಳಸಿದ್ದಾರೆ ಎನ್ನಲಾಗಿದೆ.
ಬಿಹಾರ ಡಿಸಿಎಂ ತೇಜಸ್ವಿ ಯಾದವ್ಗೆ ಕೋರ್ಟ್ ಸಮನ್ಸ್
ಅಹಮದಾಬಾದ್, ಆ. ೨೮: "ಗುಜರಾತಿಗಳು ಮಾತ್ರ ವಂಚಕರು" ಎಂದು ಟೀಕಿಸಿದ್ದಕ್ಕಾಗಿ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಈ ಸಂಬAಧ ಅಹಮದಾಬಾದ್ ಮೆಟ್ರೋಪಾಲಿಟನ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಪ್ರಕರಣ ಸಂಬAಧ ಸೆಪ್ಟೆಂಬರ್ ೨೨ ರಂದು ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ನ್ಯಾಯಾಲಯ ಸೂಚಿಸಿದೆ. ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇಂದು ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೪೯೯ ಮತ್ತು ೫೦೦ ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಅಹಮದಾಬಾದ್ನ ಸಾಮಾಜಿಕ ಕಾರ್ಯಕರ್ತ ಮತ್ತು ಉದ್ಯಮಿ ಹರೇಶ್ ಮೆಹ್ತಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ನ್ಯಾಯಾಲಯ ಬಿಹಾರ ಡಿಸಿಎಂಗೆ ಸಮನ್ಸ್ ಜಾರಿ ಮಾಡಿದೆ.
ಯುವಕರಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಚಾಮರಾಜನಗರ, ಆ. ೨೮: ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. ಗೃಹಲಕ್ಷ್ಮಿ ಯೋಜನೆ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು, ಮಂಡ್ಯಕ್ಕೆ ತೆರಳುತ್ತಿದ್ದಾಗ, ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡರಾಯಪೇಟೆ ಕ್ರಾಸ್ ಬಳಿ ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಬಿದ್ದು ನರಳುತ್ತಿದ್ದರು. ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವರು, ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.
ಪೋಷಕರಿಗೆ ವಿಷ ನೀಡಿ ಹತ್ಯೆಗೈದ ಯುವಕನ ಬಂಧನ
ಹಾಸನ, ಆ. ೨೮: ಹಾಸನ ಜಿಲ್ಲೆಯಲ್ಲಿ ಪೋಷಕರಿಗೆ ವಿಷ ನೀಡಿ ಕೊಂದಿದ್ದ ಆರೋಪದ ಮೇಲೆ ಯುವಕನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯನ್ನು ಅರಕಲಗೂಡು ತಾಲೂಕಿನ ಬಿಸಿಲಹಳ್ಳಿ ನಿವಾಸಿ ೨೭ ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಕೊಲೆಯಾದವರನ್ನು ತಂದೆ ನಂಜುAಡಪ್ಪ (೫೫) ಮತ್ತು ತಾಯಿ ಉಮಾ (೪೮) ಎನ್ನಲಾಗಿದೆ. ಪೊಲೀಸರ ಪ್ರಕಾರ, ಮಂಜುನಾಥ್ ಆಗಸ್ಟ್ ೧೫ರಂದು ತನ್ನ ಪೋಷಕರ ಆಹಾರದಲ್ಲಿ ಕೀಟನಾಶಕವನ್ನು ಬೆರೆಸಿದ್ದ. ಆಹಾರ ಸೇವಿಸಿದ ಬಳಿಕ ದಂಪತಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಕೆಲವು ದಿನಗಳ ನಂತರ ಮನೆಗೆ ಮರಳಿದ್ದರು. ಆದರೆ, ಆಗಸ್ಟ್ ೨೩ ರಂದು ನಂಜುAಡಪ್ಪ ಮತ್ತು ಉಮಾ ನಿಧನರಾದರು. ಮಂಜುನಾಥ್ ವಿಧವೆಯೊಬ್ಬರೊಂದಿಗೆ ಅನೈತಿಕ ಸಂಬAಧ ಹೊಂದಿದ್ದು, ಹಣ ದುರುಪಯೋಗ ಮಾಡಿಕೊಂಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ವಿಷಯ ತಿಳಿದು ಅವರ ತಾಯಿ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ ಮತ್ತು ತಮ್ಮಿಂದ ತೆಗೆದುಕೊಂಡ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.