ಸೋಮವಾರಪೇಟೆ, ಆ. ೨೮: ಜಿಂಕೆಯನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಯ ಮನೆಗೆ ಧಾಳಿ ನಡೆಸಿದ ಅರಣ್ಯಾಧಿಕಾರಿಗಳು, ಜಿಂಕೆಯ ಮಾಂಸ ಸಹಿತ ಕೃತ್ಯಕ್ಕೆ ಬಳಸಿದ ಕೋವಿಯನ್ನು ವಶಕ್ಕೆ ಪಡೆದಿದ್ದಾರೆ.
ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನಾಗಿಸಿದ ಆರೋಪಿ, ಚಿಕ್ಕಅಳುವಾರ ಗ್ರಾಮದ ಎ.ಕೆ. ಸುಂದರ ಸ್ಥಳದಿಂದ ಪರಾರಿಯಾಗಿದ್ದು, ಈತನ ಬಂಧನಕ್ಕೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ. ಸೋಮವಾರಪೇಟೆ ವಲಯ ವ್ಯಾಪ್ತಿಯ ಬಾಣಾವರ ಶಾಖೆಯ ಚಿಕ್ಕಅಳುವಾರ ಗ್ರಾಮ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಅರಣ್ಯಾಧಿಕಾರಿಗಳು ಮಾಂಸ ಹಾಗೂ ಕೋವಿಯನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ವಲಯ ಅರಣ್ಯಾಧಿಕಾರಿ ಚೇತನ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಾಣಾವರ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಹೆಚ್.ಎಂ. ರಾಕೇಶ್, ಗಸ್ತು ಅರಣ್ಯ ಪಾಲಕ ಪ್ರಸಾದ್ ಕುಮಾರ್, ಸದಾನಂದ ಹಿಪ್ಪರಗಿ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.