ನಾಪೋಕ್ಲು, ಆ. ೨೮: ಅರಮೇರಿಯ ಎಸ್.ಎಂ.ಎಸ್. ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಧ್ವಜಾರೋಹಣವನ್ನು ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾರತೀಯ ಸೇನಾಪಡೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಪುಲಿಯಂಡ ಪಿ. ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಲಾಯಿತು, ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ವಾಟೇರಿರ ಸ್ವಪ್ನ ಸುಬ್ಬಯ್ಯ, ನಿರ್ದೇಶಕರಾದ ಸಚಿನ್, ಉಪನ್ಯಾಸಕ ತಂಡ ಮತ್ತು ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.