ಮಡಿಕೇರಿ, ಆ. ೨೮: ಗೃಹಲಕ್ಷಿö್ಮ ಯೋಜನೆಗೆ ಸಂಬAಧಿಸಿದAತೆ ತಾ. ೩೦ರಂದು ಸೌಲಭ್ಯ ವಿತರಣೆಯನ್ನು ಫಲಾನುಭವಿಯ ಖಾತೆಗೆ ಡಿ.ಬಿ.ಟಿ. ಮೂಲಕ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಜಾರಿಗೊಳಿಸುವ ಕಾರ್ಯಕ್ರಮ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿತವಾಗಿದೆ. ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆ ಮಾತ್ರವಲ್ಲದೆ ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ಫಲಾನುಭವಿಗಳು ಕೂಡ ಸಮಾವೇಶಗೊಳ್ಳಲಿದ್ದಾರೆ.

ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ನಿಗಮದಿಂದ ಸುಮಾರು ೧೦೩ ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಾರ್ಯಾಚರಣೆ ಮಾಡಲು ಉಪನಿರ್ದೇಶಕರು, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಕೋರಿಕೆ ಬಂದಿರುತ್ತದೆ. ಅದರಂತೆ ಸದರಿ ಕಾರ್ಯಕ್ರಮಕ್ಕೆ ನಿಗಮದ ಬಸ್ಸುಗಳನ್ನು ನಿಯೋಜನೆ ಮಾಡಲು ಕ್ರಮಕೈಗೊಳ್ಳಲಾಗಿರುತ್ತದೆ.

ಇದರಿಂದಾಗಿ ತಾ. ೩೦ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಡಿಕೇರಿ, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸಬೇಕಾಗಿ ಪ್ರಕಟಣೆ ಕೋರಿದೆ.