ಮಡಿಕೇರಿ, ಆ. ೨೯: ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಕೊಡಗು ಪ್ರೆಸ್‌ಕ್ಲಬ್ ಹಾಗೂ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಕರ್ತ ಜಗದೀಶ್ ಜೋಡುಬೀಟಿ ಅವರ ‘ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ’ ಕವನ ಸಂಕಲನದ ಬಿಡುಗಡೆ ಕಾರ್ಯಕ್ರಮ ತಾ.೩೦ ರಂದು (ಇಂದು) ಗೋಣಿಕೊಪ್ಪ ಕಾವೇರಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಮಂಡ್ಯದ ಕವಿ ಹಾಗೂ ಸಂಘಟಕರಾದ ಟಿ. ಸತೀಶ್ ಜವರೇಗೌಡ ಕವಿತೆಗಳ ಜನಾರ್ಪಣೆ ಮಾಡಲಿದ್ದು, ವೀರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕರಾದ ಜಿ. ರಾಜೇಂದ್ರ ಅವರು ವಹಿಸಲಿದ್ದು, ಕವನ ಸಂಕಲನ ಕುರಿತು ಚೆಂಬೆಬೆಳ್ಳೂರಿನ ಲೇಖಕಿ ಸೋಮೆಯಂಡ ಕೌಶಲ್ಯ ಸತೀಶ್ ಮಾತನಾಡಲಿದ್ದಾರೆ. ಅತಿಥಿಗಳಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾರೈ, ಪೊನ್ನಂಪೇಟೆ ತಾಲೂಕು ಸಂಘದ ಅಧ್ಯಕ್ಷ ಕಿಶೋರ್ ನಾಚಪ್ಪ, ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್‌ಕುಮಾರ್ ಗುಹ್ಯ, ಕಾವೇರಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ.