ಚೆಯ್ಯಂಡಾಣೆ, ಆ. ೨೯: ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬೋಸರಾಜು ಅವರು ಇಗ್ಗುತ್ತಪ್ಪ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸರ್ಕಾರದ ಮುಜರಾಯಿ ಇಲಾಖೆಯಿಂದ ದೊರಕುವ ಎಲ್ಲಾ ರೀತಿಯ ಸೌಲಭ್ಯ ಒದಗಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಮಯಕ್ಕೆ ಸರಿಯಾಗಿ ಮಳೆ ಬಂದು ಜನರಿಗೆ ಅನುಕೂಲವಾಗುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಇಲ್ಲಿರುವ ಹಿರಿಯರ ಸಲಹೆ ಪಡೆದು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಶಾಸಕರೊಂದಿಗೆ ಚರ್ಚಿಸಿ ಇಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಈ ಸಂದರ್ಭ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಪ್ರಮುಖರುಗಳಾದ ಪಾಂಡAಡ ನರೇಶ್, ಬಾಚಮಂಡ ಲವ ಚಿಣ್ಣಪ್ಪ, ರಾಜ ಪೂವಣ್ಣ, ಕಲ್ಯಾಟಂಡ ಅಯ್ಯಪ್ಪ, ನಂಬುಡುಮಾಡ ಸುಬ್ರಮಣಿ, ಕಲ್ಯಾಟಂಡ ಮುತ್ತಪ್ಪ, ಉಲ್ಲಾಸ್, ದಿನೇಶ್, ಕಣಿಯರ ನಾಣಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.