ಕರಿಕೆ, ಆ. ೨೯: ಗ್ರಾಮದ ನ್ಯೂ ಫ್ರೆಂಡ್ಸ್ ಸಂಘದ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ನೆರವೇರಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ನಾರಾಯಣ, ಪುರುಷೋತ್ತಮ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಂತರ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.