ನಾಪೋಕ್ಲು, ಆ. ೨೯: ಸಮೀಪದ ಮರಂದೋಡ ಗ್ರಾಮದಲ್ಲಿ ಮತ್ತೆ ಕಾಡಾನೆಗಳು ದಾಂಧಲೆ ನಡೆಸಿದ್ದು ರೈತರು ಸಮಸ್ಯೆ ಅನುಭವಿಸುವಂತಾಗಿದೆ. ಗ್ರಾಮದ ಬಾರಿಕೆರೆ ಕಬ್ಬಣಿ ಎಂಬವರ ಮನೆಯ ವಾಹನ ಶೆಡ್ಡಿಗೆ ಅಳವಡಿಸಲಾಗಿದ್ದ ಸಿಮೆಂಟ್ ಶೀಟುಗಳನ್ನು ಭಾನುವಾರ ರಾತ್ರಿ ಕಾಡಾನೆಗಳು ಪುಡಿಮಾಡಿವೆ. ಇದರಿಂದ ನಷ್ಟ ಸಂಭವಿಸಿದೆ.

ವೀರಾಜಪೇಟೆ ವಲಯ ಅರಣ್ಯ ಅಧಿಕಾರಿಗಳು ಸ್ಥಳ ಪರಿಶೀಲಿಸಿ ನಷ್ಟ ಪರಿಹಾರವನ್ನು ನೀಡಬೇಕೆಂದು ಸ್ಥಳಕ್ಕೆ ಭೇಟಿ ನೀಡಿದ ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯ ಚೋಯಮಾಡಂಡ ಹರೀಶ್ ಮೊಣ್ಣಪ್ಪ ಒತ್ತಾಯಿಸಿದ್ದಾರೆ.