ಮುಳ್ಳೂರು, ಆ. ೩೦: ಸಮೀಪದ ಆಲೂರುಸಿದ್ದಾಪುರ ವಿಜಯ ಯುವಕ ಸಂಘದ ವತಿಯಿಂದ ಸೆ. ೩ ರಂದು ಕೈಲ್ ಮುಹೂರ್ತ ಹಬ್ಬದ ಪ್ರಯುಕ್ತ ಸರಕಾರಿ ಪ್ರಾಥಮಿಕ ಶಾಲಾ ಗ್ರಾಮೀಣ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯ ಯುವಕ ಸಂಘದ ಅಧ್ಯಕ್ಷ ರಕ್ಷಿತ್ ರಾಜಣ್ಣ ತಿಳಿಸಿದ್ದಾರೆ.

ಬೆಳಿಗ್ಗೆ ೯ ಗಂಟೆಯಿAದ ನಡೆಯಲಿರುವ ಕ್ರೀಡಾಕೂಟವನ್ನು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಸ್.ಕೆ.ಉದಯ್‌ಕುಮಾರ್ ಉದ್ಘಾಟಿಸಲಿದ್ದು ವಿಜಯ ಯುವಕ ಸಂಘದ ಗೌರವಾಧ್ಯಕ್ಷ ಕುಯುಮುಡಿ ರಮೇಶ್ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲೆ ಕೆ.ಆರ್. ಭಾರತಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸಿ.ಟಿ. ಸೋಮಶೇಖರ್, ಪ.ಪೂ.ಕಾಲೇಜು ಪ್ರಾಂಶುಪಾಲ ಕೆ.ಎಂ. ಚಂದ್ರಶೇಖರ್, ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಮುಂತಾದವರು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಜೆ ೫ ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಜಯ ಯುವಕ ಸಂಘದ ಅಧ್ಯಕ್ಷ ರಕ್ಷಿತ್ ರಾಜಣ್ಣ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದ ಪ್ರತಾಪ್‌ಸಿಂಹ, ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್‌ಗೌಡ, ಸೋಮವಾರಪೇಟೆ ಸಿ.ಕೆ.ಅಕಾಡೆಮಿ ಮುಖ್ಯಸ್ಥ ನಂಗಾರು ಚಂದ್ರಶೇಖರ್, ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ಜೆ.ಎಸ್.ವಿರೂಪಾಕ್ಷಯ್ಯ, ಶನಿವಾರಸಂತೆ ವೃತ್ತ ನಿರೀಕ್ಷಕ ಮಂಜುನಾಥ್, ಪ್ರಮುಖರಾದ ದಮಯಂತಿ, ಪರ್ಲಕೋಟಿ ಸತೀಶ್‌ಕುಮಾರ್, ಹೊಸೂರು ಶಿವಪ್ರಕಾಶ್, ಎಸ್.ಜೆ.ಪ್ರಸನ್ನಕುಮಾರ್, ವೀಣಾ ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.