ಮಡಿಕೇರಿ, ಆ. ೨೯: ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುವುದು. ಕ್ರೀಡೆಗೆ ಸರ್ಕಾರದಿಂದ ಬರುವ ಎಲ್ಲಾ ಅನುದಾನಗಳನ್ನು ಬಳಕೆ ಮಾಡಿ, ಭ್ರಷ್ಟಾಚಾರ ರಹಿತವಾಗಿ ಆಡಳಿತ ನೀಡುವುದಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಹೇಳಿದರು.
ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್‌ನಿಂದ ಅಮ್ಮತ್ತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ವಿಶೇಷ ಪ್ರೋತ್ಸಾಹ ನೀಡಬೇಕಾದ ಅವಶ್ಯಕತೆ ಇದೆ. ಚುನಾವಣೆ ಪೂರ್ವದಲ್ಲಿ ಕ್ರೀಡೆಗೆ ಉತ್ತೇಜನ ನೀಡಲಾಗುವುದೆಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ಅದರಂತೆ ನಡೆಯುತ್ತೇನೆ ಎಂದರು.
ಕೊಡಗು ಜಿಲ್ಲೆಯಲ್ಲಿ ಆಟದ ಮೈದಾನದ ಕೊರತೆ ಇದೆ. ಆಟದ ಮೈದಾನಗಳು ಪುನಶ್ಚೇತನ ಗೊಳಿಸಬೇಕಾಗಿದೆ. ಈಗಾಗಲೇ ಚುನಾವಣೆಗೂ ಮೊದಲು ನೀಡಿರುವ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸು ವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಗೆ ಬೇಕಾದ ಎಲ್ಲಾ ರೀತಿಯ ಸಹಕಾರ ಹಾಗೂ ಸುಸಜ್ಜಿತ ಫುಟ್ಬಾಲ್ ಮೈದಾನವನ್ನು ನಿರ್ಮಿಸಲು ಜಾಗ ಗುರುತಿಸಿದ್ದಲ್ಲಿ, ಕೊಡಗು ಜಿಲ್ಲೆಯಲ್ಲಿ ಫುಟ್ಬಾಲ್ ಮೈದಾನವನ್ನು ನಿರ್ಮಿಸಲು ಸರ್ಕಾರ ದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬೆಂಗಳೂರು ಶಾಂತಿನಗರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ, ಭಾರತ ರಾಷ್ಟಿçÃಯ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷ ಎನ್.ಎ. ಹ್ಯಾರಿಸ್, ಭಾರತದಲ್ಲಿ ಫುಟ್ಬಾಲ್ ವೇಗವಾಗಿ ಬೆಳೆಯುತ್ತಿದೆ. ಕರ್ನಾಟಕ ರಾಜ್ಯ ಕಳೆದ ೫೫ ವರ್ಷಗಳ ನಂತರ ಸಂತೋಷ್ ಟ್ರೋಫಿ ಚಾಂಪಿ ಯನ್ ಪಟ್ಟವನ್ನು ಅಲಂಕರಿಸಿದೆ.
ಬೆAಗಳೂರಿನಲ್ಲಿ ಸಾಫ್ ಕಪ್ ಅಂರ‍್ರಾಷ್ಟಿçÃಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿ ಯಶಸ್ಸು ಕಂಡಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲಿ ಫುಟ್ಬಾಲ್‌ಗೆ ಪ್ರತ್ಯೇಕ ಆ್ಯಪ್‌ಗೆ ಚಾಲನೆ ನೀಡಲಿದ್ದೇವೆ. ಆ್ಯಪ್ ಮೂಲಕ ಫುಟ್ಬಾಲ್ ಪಂದ್ಯಾವಳಿ ವೀಕ್ಷಣೆ ಹಾಗೂ ಫುಟ್ಬಾಲ್ ತರಬೇತಿ ನೀಡಲಾಗುತ್ತದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಫುಟ್ಬಾಲ್ ಮೈದಾನಕ್ಕೆ ಬೇಕಾದ ಜಾಗ ಗುರುತಿಸಿ, ಅದರ ಬಗ್ಗೆ ನನಗೂ ಹಾಗೂ ಎ.ಎಸ್. ಪೊನ್ನಣ್ಣ ಅವರಿಗೆ ಮಾಹಿತಿ ನೀಡಿದರೆ, ಖಂಡಿತವಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿ ಅತ್ಯಾಧುನಿಕ ಫುಟ್ಬಾಲ್ ಮೈದಾನವನ್ನು ನಿರ್ಮಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆಯಿತ್ತರು.
ಅಂರ‍್ರಾಷ್ಟಿçÃಯ ಮಾಜಿ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಗಮನಿ ಸಿದರೆ ಫೋಟೋ ಉತ್ತಮವಾಗಿ ಬೆಳೆದಿದೆ. ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ಎ. ನಾಗೇಶ್ (ಈಶ್ವರ್) ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ೨೦೦೩ ರಲ್ಲಿ ಪ್ರಾರಂಭಗೊAಡ ಕೊಡಗು ಫುಟ್ಬಾಲ್ ಅಸೋಸಿಯೇಷನ್, ರಾಜ್ಯ ಫುಟ್ಬಾಲ್ ಸಂಸ್ಥೆಗೆ ನೋಂದಣಿಗೊAಡಿದೆ.
ಕೇವಲ ಹತ್ತು ಕ್ಲಬ್ ಗಳು ಮಾತ್ರ ಇದ್ದ ಜಿಲ್ಲಾ ಫುಟ್ಬಾಲ್ ಅಸೋಸಿ ಯೇಷನ್‌ನಲ್ಲಿ ಇದೀಗ ೨೨ ಕ್ಲಬ್ ಗಳು ನೋಂದಣಿಗೊAಡಿದೆ. ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಈಗಾಗಲೇ ಹಲವಾರು ಅಂರ‍್ರಾಷ್ಟಿçÃಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಗಳು ನಡೆದಿದೆ.
ಮುಂದಿನ ದಿನಗಳಲ್ಲಿ ಅಂಡರ್ ೧೬ ಹಾಗೂ ೧೭ ಬಾಲಕ-ಬಾಲಕರಿಯರಿಗೆ ಫುಟ್ಬಾಲ್ ಪಂದ್ಯಾವಳಿಯನ್ನು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಆಯೋಜಿಸಲಿದೆ ಎಂದು ಪಿ.ಎ. ನಾಗೇಶ್ ಮಾಹಿತಿ ನೀಡಿದರು. ಕೊಡಗು ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಶಾಂತಿ ನಗರದ ಶಾಸಕ, ರಾಜ್ಯ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರೀಯ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷರಾದ ಎನ್.ಎ. ಹ್ಯಾರಿಸ್ ಅವರನ್ನು ಸನ್ಮಾನಿಸಿ ಗೌರವಿಸ ಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ವಹಿಸಿದ್ದರು.
ಈ ಸಂದರ್ಭ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಮಹಾ ಪೋಷಕರಾದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ, ಮಾಜಿ ಮಹಾಪೋಷಕ ರಾದ ವಿನೋದ್ ಶಿವಪ್ಪ, ರಾಜ್ಯ ಫುಟ್ಬಾಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಜಗದೀಶ್ ಕೊಡಗರಹಳ್ಳಿ, ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಖಜಾಂಚಿ ದೀಪು ಮಾಚಯ್ಯ, ಉಪಾಧ್ಯಕ್ಷ ಕ್ರಿಸ್ಟೋಫರ್, ಮಾಜಿ ಕಾರ್ಯದರ್ಶಿ ದಿನೇಶ್ ಬಿ.ಸಿ., ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸದಸ್ಯರಾದ ಲಿಜೇಶ್ ಅಮ್ಮತ್ತಿ, ಮಹೇಂದ್ರ ಸುಂಟಿಕೊಪ್ಪ, ರಾಜ್ಯ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರ ಇಸ್ಮಾಯಿಲ್ ಕಂಡಕರೆ ಹಾಗೂ ಜಿಲ್ಲಾ ಸಂಸ್ಥೆಯ ಫುಟ್ಬಾಲ್ ಕ್ಲಬ್ ಸದಸ್ಯರು ಹಾಜರಿದ್ದರು.