ಮಡಿಕೇರಿ, ಆ.೩೦: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವು ತಾ. ೩೧ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಶಾಸಕ ಡಾ.ಮಂಥರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕÀ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಬಿ.ವೈ.ಆನಂದ್ ರಘು, ಸಾಹಿತಿ ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಓ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.