ಸೋಮವಾರಪೇಟೆ, ಆ. ೩೦ : ಮಾಜಿ ಮುಖ್ಯಮಂತ್ರಿ ದಿ.ಆರ್. ಗುಂಡೂರಾವ್ ಅವರ ಹೆಸರಿನಲ್ಲಿ ಮಡಿಕೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತರರಾಷ್ಟಿçÃಯ ಗುಣಮಟ್ಟದ ಹೈಟೆಕ್ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಭರವಸೆ ನೀಡಿದರು.

ಇಲ್ಲಿನ ಸಂತ ಜೋಸೆಫರ ವಿದ್ಯಾಸಂಸ್ಥೆಯ ವತಿಯಿಂದ ಸಭಾಂಗಣದಲ್ಲಿ ಆಯೋಜಿಸಿದ್ದ ಮೇಜರ್ ಧ್ಯಾನ್‌ಚಂದ್ ಅವರ ಹುಟ್ಟು ಹಬ್ಬದ ಪ್ರಯುಕ್ತದ ಗೌಡಅಂತರರಾಷ್ಟಿçÃಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುಂಡೂರಾವ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಕೊಡಗಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅವರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಿ ಸಲು ತನ್ನ ಅವಧಿಯಲ್ಲಿ ಪ್ರಯತ್ನ ನಡೆಸಲಾಗುವುದು ಎಂದರು.

ಮೇಜರ್ ಧ್ಯಾನ್‌ಚಂದ್ ಅವರು ಹಾಕಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಇಡೀ ವಿಶ್ವವೇ ಮೆಚ್ಚುವಂತ ಆಟಗಾರರಾಗಿ ಬೆಳೆದ ಧ್ಯಾನ್‌ಚಂದ್ ಅವರು ದೇಶದ ಕೀರ್ತಿ ಪತಾಕೆ ಯನ್ನು ಹಾರಿಸಿದವರು ಎಂದು ಶಾಸಕರು ಬಣ್ಣಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಜೋಸೆಫರ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಎಂ. ರಾಯಪ್ಪ ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟಿçÃಯ ಕ್ರೀಡಾಪಟು ಎಂ.ಎA. ಅಯ್ಯಣ್ಣ, ನಿವೃತ್ತ ಕ್ರೀಡಾ ತರಬೇತುದಾರ ಅಂತೋಣಿ ಡಿಸೋಜ, ಇನ್ ಡೋರ್ ಕ್ರಿಕೆಟ್ ಪಟು ಆಶೀಕ್ ಕ್ರಿಸ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಕ ಡಾ. ಸದಾಶಿವ ಪಲ್ಲೇದ್, ಮುಖ್ಯ ಶಿಕ್ಷಕರಾದ ಮಾರ್ಗರೇಟ್ ನೇವಿಲ್, ಹ್ಯಾರಿ ಮೋರಸ್, ಪ್ರಾಂಶುಪಾಲ ಎ. ಥಾಮಸ್, ಹರೀಶ್, ಪ್ರಮುಖರಾದ ವಿ.ಎ. ಲಾರೆನ್ಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.