ಕುಶಾಲನಗರ, ಆ. ೨೯: ಕುಶಾಲನಗರ-ಮಡಿಕೇರಿ ರಸ್ತೆಯ ಸರಕಾರಿ ಎಂಜಿನಿಯರಿAಗ್ ಕಾಲೇಜು ಎದುರು ವಾಹನ ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆ ತಾ. ೨೯ ರ ರಾತ್ರಿ ೧೦ ಗಂಟೆ ವೇಳೆಗೆ ನಡೆದಿದೆ.

ಟಾಟಾ ಏಸ್ ವಾಹನವೊಂದು ರಸ್ತೆ ದಾಟುತ್ತಿದ್ದ ಪ್ರಮೋದ್ (೫೮) ಎಂಬವರಿಗೆ ಡಿಕ್ಕಿಯಾಗಿದ್ದು, ತೀವ್ರ ಗಾಯಗೊಂಡು ಮೃತಪಟ್ಟಿರುವುದಾಗಿ ಕುಶಾಲನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿ ಮಾದಾಪುರದ ನಿವಾಸಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.