ನಾಪೋಕ್ಲು, ಆ. ೩೦: ನಾಲ್ಕುನಾಡು ವ್ಯಾಪ್ತಿಯಲ್ಲಿ ತಾ. ೨೮ ರಂದು ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಕೊಡಗಿನಲ್ಲಿ ಮಳೆಗಾಲ ಪ್ರಾರಂಭದಲ್ಲಿ ರೈತ ತನಗೆ ಸೇರಿದ ಗದ್ದೆಯನ್ನು ಉತ್ತು, ಬಿತ್ತಿ ಗದ್ದೆಯನ್ನು ನಾಟಿ ಮಾಡಿ ದಣಿದ ಸಂದರ್ಭದಲ್ಲಿ ತಾನು ಸಂತೋಷದಿAದ ಈ ಹಬ್ಬವನ್ನು ವಿಜೃಂಭಣೆಯಿAದ ಆಚರಿಸುತ್ತಾನೆ. ಈ ಸಂದರ್ಭ ಗದ್ದೆ ಕೆಲಸದಲ್ಲಿ ದಣಿದ ಎತ್ತುಗಳನ್ನು ಸ್ನಾನ ಮಾಡಿಸಿ ನಂತರ ಕೃಷಿ ಚಟುವಟಿಕೆಗೆ ಬಳಸಿದ ವಸ್ತುಗಳಿಗೆ ಪೂಜೆ ಸಲ್ಲಿಸಿ ಎತ್ತುಗಳಿಗೆ ಪಣಿಪುಟ್ಟು ತಿನ್ನಿಸಿ ನಂತರ ಮನೆಯಲ್ಲಿರುವ ಆಯುಧಗಳಾದ ಕೋವಿ. ಕತ್ತಿ, ಭರ್ಚಿಯನ್ನು ನೆಲ್ಲಕ್ಕಿ ನಡುಬಾಡೆಯಲ್ಲಿಟ್ಟು ಅದಕ್ಕೆ ಪೂಜೆ ಸಲ್ಲಿಸಿ ಹಬ್ಬದಲ್ಲಿ ಮಾಡಿದ ಖಾದ್ಯವಾದ ಕಡಬು, ಹಂದಿ ಮಾಂಸ ಸಾರು, ಕೋಳಿ ಮಾಂಸ ಸಾರು, ಸಾರಾಯಿ ಮುಂತಾದವುಗಳನ್ನು ದೇವರಿಗೆ ಮೀದಿ ಇಡುತ್ತಾರೆ.

ಕೈಲ್ ಪೊಳ್ದ್ ಹಬ್ಬವನ್ನು ಒಂದೊAದು ಊರಿನಲ್ಲಿ ಬೇರೆ ಬೇರೆ ದಿನಗಳಲ್ಲಿ ಆಚರಿಸುತ್ತಾರೆ. ಗಾಳಿಬೀಡು ವಿಭಾಗದಲ್ಲಿ ಮೊದಲು ಹಬ್ಬವನ್ನು ಆಚರಿಸಲಾಗುತ್ತದೆ, ನಂತರ ನಾಲ್ಕು ನಾಡಿನಲ್ಲಿ ತಾ. ೨೮ ರಂದು, ಸೆಪ್ಟೆಂಬರ್ ತಿಂಗಳ ತಾ.೩ ರಂದು ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸುತ್ತಾರೆ.

- ದುಗ್ಗಳ ಸದಾನಂದ