ಮಡಿಕೇರಿ, ಆ.೩೦: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್ಟಿಇಟಿ-೨೦೨೩)ಯು ಸೆಪ್ಟೆಂಬರ್ ೩ ರಂದು ಮೊದಲನೇ ಅಧಿವೇಶನ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಹಾಗೂ ೨ನೇ ಅಧಿವೇಶನ ಮಧ್ಯಾಹ್ನ ೨ ರಿಂದ ಸಂಜೆ ೪.೩೦ ಗಂಟೆವರೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ನಗರದ ಸರ್ಕಾರಿ ಪದವಿಪೂರ್ವ ಕಾಲೇಜು (ಬ್ಲಾಕ್-೦೧), ಸರ್ಕಾರಿ ಪದವಿಪೂರ್ವ ಕಾಲೇಜು (ಬ್ಲಾಕ್-೦೨) ಮತ್ತು ನಗರದ ಸಂತ ಮೈಕಲರ ಪ್ರೌಢಶಾಲೆ ಈ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಕಚೇರಿಯ ಪರೀಕ್ಷಾ ನೋಡೆಲ್ ಅಧಿಕಾರಿ ಕೆ.ಆರ್. ಬಿಂದು ಇವರ ಮೊ. ಸಂ. ೯೬೧೧೭೨೦೩೨೦ ನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಸೌಮ್ಯ ಪೊನ್ನಪ್ಪ ತಿಳಿಸಿದ್ದಾರೆ.