ಮಡಿಕೇರಿ, ಆ. ೩೦ : ಪ್ರಸಕ್ತ(೨೦೨೩-೨೪) ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ದೂ.ಸಂ.೦೮೨೭೨-೨೨೫೫೨೮, ಮಾಹಿತಿ ಕೇಂದ್ರ, ಮಡಿಕೇರಿ ೦೮೨೭೨-೨೨೦೨೧೪ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಚ್.ವೀರಭದ್ರಪ್ಪ ಅವರು ತಿಳಿಸಿದ್ದಾರೆ.