ಮಡಿಕೇರಿ, ಆ.೩೦ : ಸಂಘದ ಸದಸ್ಯರಲ್ಲದ ವ್ಯಕ್ತಿಗಳಿಗೆ ಆಟೋ ಚಲಾಯಿಸಲು ಅವಕಾಶ ನೀಡುವುದಿಲ್ಲ ಎಂದು ಆಟೋ ಮಾಲೀಕ, ಚಾಲಕರ ಸಂಘ ಮತ್ತು ಕೊಡಗು ರಕ್ಷಣಾ ವೇದಿಕೆಯ ಆಟೋ ಚಾಲಕರ ಸಂಘದ ಪದಾಧಿಕಾರಿಗಳು ನೀಡಿರುವ ಹೇಳಿಕೆ ಚಾಲಕರÀ ಜೀವನದ ಹಕ್ಕಿಗೆ ವಿರುದ್ಧವಾಗಿದೆ ಎಂದು ಮಡಿಕೇರಿ ನಗರದ ಜಾಗೃತ ಆಟೋ ಚಾಲಕರ ಬಳಗದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಳಗದ ಸದಸ್ಯರಾದ ಎಂ.ಬಿ.ದುರ್ಗೆಶ್, ವೇಣು, ಹರ್ಷಿತ್, ಪ್ರಸಾದ್ ಸೇರಿದಂತೆ ೩೦ಕ್ಕೂ ಹೆಚ್ಚು ಆಟೋ ಚಾಲಕರು ಆಟೋ ಮಾಲೀಕ, ಚಾಲಕರ ಸಂಘ ಹಾಗೂ ಸಂಚಾರಿ ಠಾಣಾಧಿಕಾರಿ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿ ಈ ಕುರಿತು ಚರ್ಚಿಸಿದರು. ಸಂಘದ ಸದಸ್ಯತ್ವ ಕಡ್ಡಾಯವಾಗಿ ಪಡೆದಿರಬೇಕು ಎಂದು ಪೊಲೀಸ್ ಇಲಾಖೆ ಅಥವಾ ಸಾರಿಗೆ ಇಲಾಖೆ ನಿರ್ಣಯ ಮಾಡಿದರೆ ನಾವು ಒಪ್ಪುತ್ತೇವೆ. ಆದರೆ ಸಂಘದ ಪದಾಧಿಕಾರಿಗಳು ಕಾನೂನಿಗೆ ವಿರುದ್ಧವಾಗಿ ನಿಯಮ ರೂಪಿಸಿದರೆ ಕಾನೂನು ಸಮರ ನಡೆಸುತ್ತೇವೆ ಎಂದು ಸದಸ್ಯರು ಹೇಳಿದರು.