‘ಗೃಹಲಕ್ಷಿö್ಮ' ಯೋಜನೆಗೆ ಅದ್ಧೂರಿ ಚಾಲನೆ

ಮೈಸೂರು, ಆ. ೩೦: ದಶದಿಕ್ಕುಗಳಿಂದಲೂ ಧಾವಿಸಿ ಬಂದ ಸಹಸ್ರಾರು ಮಹಿಳೆಯರ ಕಾತರ, ಸಂಭ್ರಮದ ನಡುವೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬುಧವಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷಿö್ಮ' ಯೋಜನೆಗೆ ಅದ್ಧೂರಿ ಚಾಲನೆ ದೊರಕಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಶೇಷ ಅತಿಥಿ ರಾಹುಲ್ ಗಾಂಧಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದ್ದ ರಾಜ್ಯದ ೧೨,೬೦೦ ಸ್ಥಳಗಳಲ್ಲೂ ಸಂಭ್ರಮ ಮೇರೆ ಮೀರಿತ್ತು. ಉದ್ಘಾಟನೆಯಾಗುತ್ತಿದಂತೆ ವೇದಿಕೆಗೆ ಬಂದ ಅಷ್ಟಲಕ್ಷಿö್ಮಯರು ಹಾಗೂ ೭೨ ಸಾವಿರ ಮೌಲ್ಯದ ಚೆಕ್ ಪ್ರತಿಕೃತಿಯು ಸನ್ನಿವೇಶವನ್ನು ಕಳೆಗಟ್ಟಿಸಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಶಾಸಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ನಂತರ ಮಾತನಾಡಿದ ರಾಹುಲ್ ಗಾಂಧಿ, ಚುನಾವಣೆಗೂ ಮುನ್ನ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿದಾಗ, ಇವೆಲ್ಲ ಅಸಾಧ್ಯ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದರು. ಕಾಂಗ್ರೆಸ್ ಸುಳ್ಳು ಹೇಳ್ತಿದೆ ಎಂದಿದ್ದರು. ಆದರೆ ಈಗ ಸತ್ಯ ನಿಮ್ಮ ಕಣ್ಣ ಮುಂದೆಯೇ ಇದೆ. ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಉಚಿತವಾಗಿ ಪ್ರತಿ ಮನೆಗೂ ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಪ್ರತಿ ಬಿಪಿಎಲ್ ಕುಟುಂಬಕ್ಕೆ ೧೦ ಕೆ.ಜಿ. ಅಕ್ಕಿ ಉಚಿತವಾಗಿ ನೀಡಲಾಗುತ್ತಿದೆ. ಶೀಘ್ರದಲ್ಲೇ ನಿರುದ್ಯೋಗಿಗಳಿಗಾಗಿ ಯುವನಿಧಿ ಕಾರ್ಯಕ್ರಮವೂ ಅನುಷ್ಠಾನಕ್ಕೆ ಬರಲಿದೆ ಎಂದರು.

ಹೆಚ್.ಡಿ.ಕೆ. ಆರೋಗ್ಯ ಸ್ಥಿರ

ಬೆಂಗಳೂರು, ಆ. ೩೦: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಅವರನ್ನು ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆ ಸಲುವಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ಕುಮಾರಸ್ವಾಮಿ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಆಸ್ಪತ್ರೆಯು ಪ್ರಕಟಣೆಯಲ್ಲಿ ತಿಳಿಸಿದೆ. ಬಳಲಿಕೆ ಮತ್ತು ಅಸ್ವಸ್ಥತೆಯಿಂದ ಬೆಳಗಿನ ಜಾವ ೩.೪೦ರ ಸುಮಾರಿಗೆ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾದರು. ಕೂಡಲೇ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಗೆ ಕುಮಾರಸ್ವಾಮಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಪಿಡಿಓ ವರ್ಗಾವಣೆ ಪಟ್ಟಿ ಸೋರಿಕೆ - ತನಿಖೆ

ಬೆಂಗಳೂರು, ಆ. ೩೦: ಮುಖ್ಯಮಂತ್ರಿಯವರ ಅನುಮೋದನೆಗಾಗಿ ಸಲ್ಲಿಸಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ವರ್ಗಾವಣೆ ಪಟ್ಟಿಯನ್ನು ಇ-ಆಫೀಸ್ ತಂತ್ರಾAಶದಿAದಲೇ ಕದ್ದು, ಸೋರಿಕೆ ಮಾಡಿರುವ ಶಂಕೆ ಬಲವಾಗುತ್ತಿದೆ. ಸತ್ಯಾಂಶ ಪತ್ತೆಗೆ ಎನ್‌ಐಸಿಯಿಂದ ಕಡತದ ಚಲನೆಯ ವರದಿ ಪಡೆಯಲು ಪೊಲೀಸರು ಸಿದ್ಧತೆ ನಡೆಯುತ್ತಿದೆ. ಪಂಚಾಯತ್ ರಾಜ್ ಆಯುಕ್ತಾಲಯದ ಕಂಪ್ಯೂಟರ್‌ಗಳನ್ನು ಹ್ಯಾಕ್ ಮಾಡಿ ವರ್ಗಾವಣೆ ಪಟ್ಟಿಗಳನ್ನು ಸೋರಿಕೆ ಮಾಡಲಾಗಿದೆ ಎಂದು ಅಯುಕ್ತಾಲಯದ ಆಡಳಿತ ವಿಭಾಗದ ಉಪ ನಿರ್ದೇಶಕಿ ಭಾಗ್ಯಶ್ರೀ ಹೆಚ್.ಎಸ್. ದೂರಿನಲ್ಲಿ ತಿಳಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿ ಎನ್. ಜಯರಾಂ ಬಳಿ ಬಾಕಿ ಇರುವ ಪಿಡಿಒಗಳ ವರ್ಗಾವಣೆ ಪಟ್ಟಿಗಳು ಸೋರಿಕೆಯಾಗಿರುವ ಮೂಲ ಪತ್ತೆಗೆ ಬೆಂಗಳೂರು ಕೇಂದ್ರ ವಿಭಾಗದ ಸೈಬರ್ ಕ್ರೆöÊಂ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದೂರಿನಲ್ಲಿ ಹೆಸರಿಸಿದ್ದ ಪಿಡಿಒಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ವಾಟ್ಸ್ಆಪ್ ಗುಂಪುಗಳಲ್ಲಿ ವರ್ಗಾವಣೆ ಪಟ್ಟಿಗಳನ್ನು ಹಂಚಿಕೊAಡಿದ್ದ ಇನ್ನೂ ಕೆಲವು ಪಿಡಿಒಗಳ ವಿಚಾರಣೆ ನಡೆಸಲಾಗಿದೆ. ಅಧಿಕಾರಿಗಳ ಮೂಲಕ ತಮಗೆ ಪಟ್ಟಿ ಲಭ್ಯವಾಗಿತ್ತು ಎಂಬ ಮಾಹಿತಿಯನ್ನು ಅವರು ತನಿಖಾ ತಂಡದ ಬಳಿ ಹಂಚಿಕೊAಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ನ್ಯಾಯಾಲಯದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ಆ. ೩೦: ಆದಾಯ ಮೀರಿ ಆಸ್ತಿಗಳಿಕೆ ಆರೋಪದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಬಿ.ರಾಮಕೃಷ್ಣ ಎಂಬವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು ರೂ. ೩೦ ಲಕ್ಷ ದಂಡ ವಿಧಿಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಸಂಬAಧ ಬಿ. ರಾಮಕೃಷ್ಣ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು, ಅವರನ್ನು ಆರೋಪ ಮುಕ್ತಗೊಳಿಸಿದೆ. ವಿಚಾರಣಾ ನ್ಯಾಯಾಲಯ ಸೂಕ್ತ ಸಾಕ್ಷಾö್ಯಧಾರಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಕಣ್ಣು ಮುಚ್ಚಿಕೊಂಡು ಲೋಕಾಯುಕ್ತ ಪೊಲೀಸರ ದೋಷಾರೋಪ ಪಟ್ಟಿಯನ್ನು ಅಂಗೀಕರಿಸಿದೆ. ಮೇಲ್ಮನವಿದಾರರ ಪತ್ನಿ ವ್ಯಾಪಾರ ಮಾಡುತ್ತಿದ್ದರು. ಅವರೂ ತಮ್ಮ ಆದಾಯಕ್ಕೆ ಪ್ರತ್ಯೇಕವಾಗಿ ತೆರಿಗೆ ಪಾವತಿಸುತ್ತಿದ್ದರು. ಈ ವ್ಯಾಪಾರದಿಂದ ಬಂದ ಆದಾಯವನ್ನು ಮೇಲ್ಮನವಿದಾರರ ಅಕ್ರಮ ಸಂಪಾದನೆ ಎಂದು ಪರಿಗಣಿಸಲಾಗಿದೆ. ಇನ್‌ಸ್ಪೆಕ್ಟರ್ ಅವರ ಹೂಡಿಕೆ ಮತ್ತು ವೆಚ್ಚಗಳನ್ನು ತಪ್ಪಾಗಿ ಲೆಕ್ಕಾಚಾರ ಮಾಡಲಾಗಿದೆ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಿದೆ.

‘ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಕೇಜ್ರಿವಾಲ್’

ನವದೆಹಲಿ, ಆ. ೩೦: ದೆಹಲಿ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಅವರು ದೇಶಕ್ಕೆ ಮಾದರಿಯಾಗುವಂತಹ ಕಾರ್ಯಗಳನ್ನು ಮಾಡಿರುವುದರಿಂದ ‘ಇಂಡಿಯಾ' ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಅವರ ಹೆಸರು ಪರಿಗಣಿಸುವುದು ಸೂಕ್ತ ಎಂದು ಎಎಪಿ ರಾಷ್ಟಿçÃಯ ವಕ್ತಾರೆ ಪ್ರಿಯಾಂಕ ಕಕ್ಕರ್ ಹೇಳಿದ್ದಾರೆ. ಮುಂಬೈನಲ್ಲಿ ಗುರುವಾರದಿಂದ ಆರಂಭವಾಗಲಿರುವ ‘ಇಂಡಿಯಾ'ದ ಮೂರನೇ ಸಭೆಗೂ ಮುನ್ನ ಈ ಹೇಳಿಕೆ ನೀಡಿರುವ ಪ್ರಿಯಾಂಕ ಕಕ್ಕರ್ ಅವರು, ಕೇಜ್ರಿವಾಲ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಪ್ರಸ್ತಾಪಿಸಲಾಗಿದೆ. ಅವರು ನಿರಂತರವಾಗಿ ಜನರ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ ಎಂದಿದ್ದಾರೆ. ಅವರು ನೀಡಿರುವ ಮಾದರಿ ಅಡಳಿತದಿಂದಾಗಿ ದೆಹಲಿಯಲ್ಲಿ ಹಣದುಬ್ಬರ ಮಟ್ಟವು ಕನಿಷ್ಟ ಪ್ರಮಾಣಕ್ಕೆ ತಲುಪಿತ್ತು. ಅವರು ಜನರಿಗೆ ಲಾಭವಾಗುವಂತಹ ಮಾದರಿಗಳನ್ನು ನೀಡಿದ್ದಾರೆ. ಅವರು ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ನನ್ನ ಆಸೆ. ಆದರೆ, ಅದು ನನ್ನ ಕೈಯಲ್ಲಿ ಇಲ್ಲ ಎಂದೂ ಅವರು ಹೇಳಿದ್ದಾರೆ. ಕೇಜ್ರಿವಾಲ್ ಹೆಸರು ಪ್ರಸ್ತಾಪಿಸಿದ ಕೆಲವೇ ಗಂಟೆಗಳ ಬಳಿಕ ದೆಹಲಿ ಸಂಪುಟ ಸಚಿವೆ ಅತಿಶಿ ಸಿಂಗ್ ಅವರು ಕೇಜ್ರಿವಾಲ್ ಅವರು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ. ಅವರು ಪ್ರಧಾನಿ ಅಭ್ಯರ್ಥಿ ಸ್ಥಾನದ ಸ್ಪರ್ಧೆಯಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಗೋರಕ್ಷಕ ಬಿಟ್ಟು ಭಜರಂಗಿಗೆ ಜಾಮೀನು

ಗುರುಗ್ರಾಮ, ಆ. ೩೦: ಇಲ್ಲಿನ ಹಾಗೂ ನೂಹ್ ಜಿಲ್ಲೆಯಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬAಧಿಸಿದAತೆ ಬಂಧಿತರಾಗಿದ್ದ ಗೋರಕ್ಷಕ ಬಿಟ್ಟು ಭಜರಂಗಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಟ್ಟು ಭಜರಂಗಿ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪ್ರಥಮ ದರ್ಜೆ ನ್ಯಾಯಾಧೀಶರಾದ ಸಂದೀಪ್ ಕುಮಾರ್ ಅವರು ಬುಧವಾರ ಜಾಮೀನು ಮಂಜೂರು ಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ. ನೂಡ್‌ನ ಸದ ಪೊಲೀಸ್ ಠಾಣೆಯಲ್ಲಿ ಬಿಟ್ಟು ಭಜರಂಗಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಎಸ್ಪಿ ಉಷಾ ಕುಂಡು ದೂರು ನೀಡಿದ್ದರು. ಬಿಟ್ಟು ಭಜರಂಗಿ ಅವರನ್ನು ಆಗಸ್ಟ್ ೧೫ರಂದು ಫರಿದಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದರು. ನ್ಯಾಯಾಲಯವು ಅವರನ್ನು ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತ್ತು. ಬಳಿಕ ಅವರನ್ನು ಫರಿದಾಬಾದ್ ಜಿಲ್ಲೆಯ ನೀಮ್ಮಾ ಜೈಲಿಗೆ ಕಳುಹಿಸಲಾಗಿತ್ತು.

ಇಮ್ರಾನ್‌ಖಾನ್ ನ್ಯಾಯಾಂಗ ಬಂಧನ ವಿಸ್ತರಣೆ

ಇಸ್ಲಾಮಾಬಾದ್, ಆ. ೩೦: ಅಧಿಕೃತ ರಹಸ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ, ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ಖಾನ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ ೧೩ ರವರೆಗೆ ವಿಸ್ತರಿಸಿ ಇಲ್ಲಿನ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ. ಇಮ್ರಾನ್ ಖಾನ್ ಅವರನ್ನು ಇರಿಸಲಾಗಿರುವ ಅಟಾಕ್‌ನ ಜೈಲಿಗೆ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶ ಅಬುವಲ್ ಹಸನತ್ ಜುಲ್ಕರ್‌ನೈನ್ ಅವರು ಈ ಕುರಿತ ಆದೇಶ ಹೊರಡಿಸಿದರು.