ಸಿದ್ದಾಪುರ, ಆ. ೩೧: ಸಮಾಜದಲ್ಲಿ ಜಾತಿ ತಾರತಮ್ಯ ದೂರವಾದರೆ ಮಾತ್ರ ಸಮಾಜದ ಏಳಿಗೆ ಸಾಧ್ಯ ಎಂದು ವೀರಾಜಪೇಟೆ ಕ್ಷೇತ್ರ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ಸಿದ್ದಾಪುರದ ಸ್ವರ್ಣ ಮಾಲಾ ಸಭಾಂಗಣದಲ್ಲಿ ಶ್ರೀ ನಾರಾಯಣ ಪರಿಪಾಲನಾ ಯೋಗಂ ಜಿಲ್ಲಾ ಘಟಕದ ವತಿಯಿಂದ ನಡೆದ ಶ್ರೀ ನಾರಾಯಣ ಗುರುಗಳ ೧೬೯ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾರಾಯಣ ಗುರುಗಳ ಜಯಂತಿ ಆಚರಣೆಯು ಕೇವಲ ಆಚರಣೆಯಾಗಿ ಉಳಿಯದೆ ಅವರ ತತ್ವ ಸಿದ್ಧಾಂತಗಳು ಎಲ್ಲರೂ ಅಳವಡಿಸಿಕೊಳ್ಳಬೇಕು. ತಾರತಮ್ಯ ವಿರುದ್ಧ ಹೋರಾಟ ಮಾಡಿದ ಮಹಾನ್ ವ್ಯಕ್ತಿ ನಾರಾಯಣ ಗುರುಗಳು. ಜಾತಿ, ಧರ್ಮದ ಹೆಸರಿನಲ್ಲಿ ನಡೆಯುವ ಕೃತ್ಯಗಳುಪರಿಪಾಲನಾ ಯೋಗಂ ಜಿಲ್ಲಾ ಘಟಕದ ವತಿಯಿಂದ ನಡೆದ ಶ್ರೀ ನಾರಾಯಣ ಗುರುಗಳ ೧೬೯ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾರಾಯಣ ಗುರುಗಳ ಜಯಂತಿ ಆಚರಣೆಯು ಕೇವಲ ಆಚರಣೆಯಾಗಿ ಉಳಿಯದೆ ಅವರ ತತ್ವ ಸಿದ್ಧಾಂತಗಳು ಎಲ್ಲರೂ ಅಳವಡಿಸಿಕೊಳ್ಳಬೇಕು. ತಾರತಮ್ಯ ವಿರುದ್ಧ ಹೋರಾಟ ಮಾಡಿದ ಮಹಾನ್ ವ್ಯಕ್ತಿ ನಾರಾಯಣ ಗುರುಗಳು. ಜಾತಿ, ಧರ್ಮದ ಹೆಸರಿನಲ್ಲಿ ನಡೆಯುವ ಕೃತ್ಯಗಳು ನೀಡಿದರು. ಎಸ್ಎನ್ಡಿಪಿ ಯೂನಿಯನ್ ಅಧ್ಯಕ್ಷ ವಿ.ಕೆ. ಲೋಕೇಶ್ ಪ್ರಾಸ್ತಾವಿಕ ಮಾತನಾಡಿ ಎಸ್ಎನ್ಡಿಪಿ ಸಂಘಟನೆಯು ಸಮಾಜದ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯದಲ್ಲಿ ತೊಡಗುವ ಮೂಲಕ ಸಮಾಜಕ್ಕೆ ಬೆನ್ನೆಲುಬಾಗಿ ನಿಂತಿದೆ . ಅಲ್ಲದೆ ಕಾರ್ಯಕ್ರಮದಲ್ಲಿ ಯುವ ಜನತೆಗೆ ಮಾದರಿ ಯಾಗಬೇಕೆಂಬ ಉದ್ದೇಶದಿಂದ ದಾಂಪತ್ಯ ಜೀವನದ(ಮೊದಲ ಪುಟದಿಂದ) ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ. ಯುವಜನತೆ ದೇಶ ಸೇವೆಯತ್ತ ಗಮನ ಹರಿಸಬೇಕೆಂಬ ನಿಟ್ಟಿನಲ್ಲಿ ನಿವೃತ ಯೋಧರನ್ನು ಸನ್ಮಾನಿಸಲಾಗುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ಲ್ಲಿ ೫೦ ವರ್ಷ ಕಳೆದ ದಂಪತಿಗಳನ್ನು ಸನ್ಮಾನಿಸಲಾಗುತ್ತಿದೆ. ವಿದ್ಯೆಯೊಂದಿಗೆ ಎಲ್ಲರೂ ಪ್ರಬುದ್ಧರಾಗಬೇಕೆಂಬ ಗುರುಗಳ ಧ್ಯೇಯ್ಯ ವಾಕ್ಯದಂತೆ ಪ್ರತಿಭಾನ್ವಿತ
ಸಮಾಜದ ಎಲ್ಲಾ ಬಾಂಧವರು ಸಂಘಟನೆಯಲ್ಲಿ ಕಾರ್ಯ ಪ್ರವೃತ್ತರಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೊಡಗು ಮಲಯಾಳಿ ಸಂಘದ ಅಧ್ಯಕ್ಷ ವಿ.ಎಂ. ವಿಜಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಟಿ.ಎಲ್. ಪ್ರವೀಣ್, ಟಿ.ಆರ್. ಸೋಮನಾಥ್, ಟಿ. ಎಸ್. ಸಜೀವ, ರವಿ, ಆಚರಣಾ ಸಮಿತಿ ಅಧ್ಯಕ್ಷ ಆರ್ ಗಿರೀಶ್, ಕಾರ್ಯದರ್ಶಿ ರೀಶಾ ಸುರೇಂದ್ರ ಇನ್ನಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಎಸ್ಎನ್ಡಿಪಿ ಕೊಡಗು ಯೂನಿಯನ್ ಕಾರ್ಯದರ್ಶಿ ಪ್ರೇಮಾನಂದ ಸ್ವಾಗತಿಸಿ, ಸುನಿತ ಗಿರೀಶ್ ನಿರೂಪಿಸಿ, ಕೊಡಗು ಯೂನಿಯನ್ ಉಪಾಧ್ಯಕ್ಷ ಆರ್ ರಾಜನ್ ವಂದಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ರೂ. ೩೬ ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಎಸ್ಎನ್ಡಿಪಿಯ ನೂತನ ಕಟ್ಟಡವನ್ನು ಉದ್ಘಾಟಿಸ ಲಾಯಿತು. ನಂತರ ಸಾಂಪ್ರದಾಯಿಕ ಉಡುಗೆ ತೊಟ್ಟ ಸಾವಿರಾರು ಮಹಿಳೆಯರು ಕಲಶ ಹಿಡಿದು, ಚಂಡೆ ವಾದ್ಯಗಳೊಂದಿಗೆ ಉತ್ಸವ ಮೂರ್ತಿ ಯನ್ನು ಅಲಂಕೃತ ಮಂಟಪದೊAದಿಗೆ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಸಭಾಂಗಣಕ್ಕೆ ತರಲಾಯಿತು. ಕಾರ್ಯಕ್ರಮದಲ್ಲಿ ಚಂಡೆ ಮದ್ದಳೆ ಗಮನ ಸೆಳೆಯಿತು. ಅಲ್ಲದೆ ಸಿದ್ದಾಪುರ ನಗರವು ತಳಿರು ತೋರಣಗಳಿಂದ ಕಂಗೊಳಿಸಿತ್ತು.
ನAತರ ಕೇರಳದ ಸೂರ್ಯ ಕಮ್ಯೂನಿಕೇಷನ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವು ಉತ್ಸವದ ಮೆರುಗನ್ನು ಹೆಚ್ಚಿಸಿತ್ತು. ಅಲ್ಲದೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ನಿವೃತ್ತ ಯೋಧರು ಹಾಗೂ ಐವತ್ತು ವರ್ಷ ದಾಂಪತ್ಯ ಜೀವನ ಪೂರೈಸಿದ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.