ಮಡಿಕೇರಿ, ಆ. ೩೦: ನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ವ್ಯವಸ್ಥಾಪಕಿ ಗೀತಾ ಅವರನ್ನು ವರ್ಗಾವಣೆ ಮಾಡಿದ್ದು, ತನಿಖಾ ವರದಿ ಬಂದ ಬಳಿಕ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.

ಕೆ.ಎಸ್.ಆರ್.ಟಿ.ಸಿ ನೌಕರರ ರಾಜ್ಯ ಸಂಘದ ಪದಾಧಿಕಾರಿಗಳು ಇಂದು ಡಿಪೋಗೆ ಆಗಮಿಸಿ ತಾ. ೨೯ ರಂದು ಸಿಬ್ಬಂದಿ ವಿಷ ಸೇವಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಮೇಲ್ನೋಟಕ್ಕೆ ವ್ಯವಸ್ಥಾಪಕಿಯ ಕಿರುಕುಳವಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಸೇರಿದಂತೆ ಸಿಬ್ಬಂದಿಗಳ ಸಮಸ್ಯೆಯ ಬಗ್ಗೆ ಅಧಿಕಾರಿಯ ಮುಂದಿಟ್ಟರು.

ಸಂಘದ ರಾಜ್ಯಾಧ್ಯಕ್ಷ ಜಗದೀಶ್ ಮಾತನಾಡಿ, ಅಧಿಕಾರಿಯನ್ನು ಅಮಾನತ್ತು ಮಾಡಬೇಕೆಂಬುದು ನಮ್ಮೆಲ್ಲರ ಆಗ್ರಹವಾಗಿದೆ. ಸದ್ಯಕ್ಕೆ ಅವರನ್ನು ಬೇರೆಡೆ ವರ್ಗಾವಣೆ ಗೊಳಿಸಲಾಗಿದೆ. ಮಡಿಕೇರಿ ಡಿಪೋದಲ್ಲಿ ಈ ರೀತಿ ಘಟನೆ ನಡೆದಿರುವುದು ಸರಿಯಲ್ಲ. ಅಧಿಕಾರಿಗಳು ಸಿಬ್ಬಂದಿಗಳೊAದಿಗೆ ಮಾನವೀಯತೆಯಿಂದ ವರ್ತಿಸಬೇಕು ಎಂದ ಅವರು, ಹೆಚ್ಚುವರಿಯಾಗಿ ಕರ್ತವ್ಯ ಮಾಡಿದ ಚಾಲಕ, ನಿರ್ವಾಹಕರಿಗೆ ಸಿಗಬೇಕಾದ ಹಣ ದೊರೆತಿಲ್ಲ. ಈ ಬಗ್ಗೆಯೂ ಕ್ರಮವಹಿಸಬೇಕು. ಬಸ್ ಶುಚಿತ್ವಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಆಗ್ರಹಿಸಿದರು.

ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಮಾತನಾಡಿ, ಗೀತಾ ಅವರು ರಾಮನಾಥಪುರಕ್ಕೆ ವರ್ಗಾವಣೆ ಗೊಂಡಿದ್ದಾರೆ. ಸಂಘದ ಪದಾಧಿಕಾರಿಗಳ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ರಾಜ್ಯ ಸಂಘದ ಪ್ರಧಾನ ಕಾಯದರ್ಶಿ ರಾಮು, ಖಜಾಂಜಿ ಹೆಚ್.ಕೆ. ಯೋಗೇಶ್, ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಡಿ. ನಾಗೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.