ಮೂರ್ನಾಡು, ಆ. ೩೧: ಇಲ್ಲಿನ ನಂ. ೪೩೯ನೇ ಸಹಕಾರ ಸ್ಪೋರ್ಟ್ಸ್ ಕ್ಲಬ್ನ ವತಿಯಿಂದ ೯೯ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮವನ್ನು ತಾ. ೩ ರಂದು ಆಯೋಜಿಸಲಾಗಿದೆ.
ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಆಟೋಟಗಳ ಕಾರ್ಯಕ್ರಮಗಳನ್ನು ಅಪರಾಹ್ನ ೧.೩೦ ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ ಉದ್ಘಾಟಿಸಲಿದ್ದಾರೆ. ಸಾರ್ವಜನಿಕರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಮಹನೀಯರಿಗೆ, ಮಹಿಳೆಯರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ವಿವಿಧ ಓಟದ ಸ್ಪರ್ಧೆಗಳು, ಕಣ್ಣುಕಟ್ಟಿ ಮಡಿಕೆ ಒಡೆಯುವುದು, ಭಾರದ ಕಲ್ಲು ಎಸೆತ, ಸಂಗೀತ ಕುರ್ಚಿ, ನಿಂಬೆಹಣ್ಣು ಚಮಚ ಓಟ, ವಾದ್ಯದ ಕುಣಿತ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ.
ಅಪರಾಹ್ನ ೪.೩೦ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ, ಪದ್ಮಶ್ರೀ ಪ್ರಶಸ್ತಿ ವಿಜೇತೆ ಐಮುಡಿಯಂಡ ರಾಣಿ ಮಾಚಯ್ಯ ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ಮುಂಡAಡ ಪವಿ ಸೋಮಣ್ಣ ವಹಿಸಲಿದ್ದು, ಈ ಸಂದರ್ಭ ಅಂರ್ರಾಷ್ಟಿçÃಯ ಹಾಕಿ ಆಟಗಾರರು ಮತ್ತು ಏಕಲವ್ಯ ಪ್ರಶಸ್ತಿ ವಿಜೇತೆ ಕಂಬೀರAಡ ಪೊನ್ನಮ್ಮ ಬೋಪಣ್ಣ ಅವರನ್ನು ಸನ್ಮಾನಿಸಲಾಗುವುದು.