ಕುಶಾಲನಗರ, ಆ. ೩೧ : ವಾಣಿಜ್ಯ ನಗರ ಕುಶಾಲನಗರದಲ್ಲಿ ನಿರ್ಮಾಣವಾಗುತ್ತಿರುವ ಪುರಸಭೆಯ ವಾಣಿಜ್ಯ ಸಂಕೀರ್ಣ ಮಳಿಗೆ ಕಾಮಗಾರಿ ಕಳಪೆ ಹಾಗೂ ಅವೈಜ್ಞಾನಿಕದಿಂದ ಕೂಡಿದೆ ಎಂದು ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿವೆ.
ಅಂದಾಜು ರೂ. ೧ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಣಿಜ್ಯ ಕಟ್ಟಡ ಕಾಮಗಾರಿ ಕಳೆದ ಐದು ವರ್ಷಗಳಿಂದ ನಡೆಯುತ್ತಿದೆ. ನಿರ್ಮಾಣಗೊಂಡಿರುವ ಅಂಗಡಿ ಮಳಿಗೆಗಳು ಗಾಳಿ-ಬೆಳಕು ಕೊರತೆಯೊಂದಿಗೆ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವುದಾಗಿ ದೂರುಗಳು ಬಂದಿವೆ.
ಕಟ್ಟಡದ ನೆಲ ಮಹಡಿಯಲ್ಲಿ ನಿರ್ಮಾಣಗೊಂಡಿರುವ ವಾಹನ ನಿಲುಗಡೆ ಮಾಡಲು ಕೈಗೆತ್ತಿಕೊಂಡಿರುವ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಅವೈಜ್ಞಾನಿಕವಾಗಿ ನಿರ್ಮಾಣ ಗೊಂಡಿದೆ ಎಂಬ ಆರೋಪ ಬಂದ ಹಿನ್ನೆಲೆ ಶಾಸಕ ಡಾ ಮಂಥರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಕೈಗೊಳ್ಳಲಾಗುವುದು ಎಂದು ಪುರಸಭೆಯ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್ ‘ಶಕ್ತಿ’ಯೊಂದಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಅತಿ ಶೀಘ್ರವಾಗಿ ಬೆಳೆಯುತ್ತಿರುವ ಕುಶಾಲನಗರ ಪಟ್ಟಣದಲ್ಲಿ ಸ್ಥಳೀಯ ಪಂಚಾಯಿತಿಯ ವಾಣಿಜ್ಯ ಸಂಕೀರ್ಣವೊAದು ಅವೈಜ್ಞಾನಿಕವಾಗಿ ನಿರ್ಮಾಣಗೊಳ್ಳುತ್ತಿದ್ದು ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ತಕ್ಷಣವೇ ಗಮನಹರಿಸಿ ಕಟ್ಟಡಗಳ ನ್ಯೂನತೆಯನ್ನು ಬಗೆಹರಿಸುವ ಮೂಲಕ ಸ್ಥಳೀಯ ಆಡಳಿತಕ್ಕೆ ಬರುವ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಾಗಿದೆ.
- ಚಂದ್ರಮೋಹನ್.