ಚೆಯ್ಯಂಡಾಣೆ, ಆ. ೩೧: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಸಮೀಪದ ಕೀಮಲೆ ಕಾಡಿನಲ್ಲಿ ಚಿರತೆಯೊಂದು ಸಂಚರಿಸುವ ವೀಡಿಯೋ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ.

ಈ ಹಿಂದೆ ಸ್ಥಳೀಯ ನಿವಾಸಿ ಹೇಮಂತ್ ಅವರ ಮನೆ ಆವರಣದಲ್ಲಿ ಅಳವಡಿಸಿದ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಕಂಡುಬAದಿದೆ. ಗ್ರಾಮದ ಚಡಗರ ಕಿಶನ್ ಎಂಬವರ ಸಾಕು ನಾಯಿಯನ್ನು ಚಿರತೆ ಕೊಂದು ಹಾಕಿತ್ತು. ಶಾಲಾ ವಿದ್ಯಾರ್ಥಿಗಳು, ಕಾರ್ಮಿಕರು ಭಯದಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶಕ್ತಿಯೊಂದಿಗೆ ಮಾಹಿತಿ ನೀಡಿದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಬೇಪುಡಿಯಂಡ ವಿಲಿನ್ ಈ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಅಪಾರ ನಷ್ಟ ಸಂಭವಿಸಿದೆ. ಇದೀಗ ಚಿರತೆ ಪ್ರತ್ಯಕ್ಷಗೊಂಡಿದ್ದು, ಜನರು ಭಯದಿಂದ ಕಾಲ ಕಳೆಯುವಂತಾಗಿದೆ. ಅರಣ್ಯ ಇಲಾಖೆ ಕೂಡಲೇ ಕಾಡಾನೆ ಹಾವಳಿ ಹಾಗೂ ಚಿರತೆಯನ್ನು ಸೆರೆ ಹಿಡಿದು ಗ್ರಾಮಕ್ಕೆ ನುಸುಳದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಅಶ್ರಫ್