ಮಡಿಕೇರಿ, ಆ.೩೧ : ವೀರಾಜಪೇಟೆ ವಲಯ ಅಬಕಾರಿ ನಿರೀಕ್ಷಕರ ಕಚೇರಿ ಆವರಣದಲ್ಲಿರುವ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ೫ ವಾಹನಗಳನ್ನು ಷರತ್ತುಗಳ ಪ್ರಕಾರ ಸೆಪ್ಟೆಂಬರ್ ೭ ರಂದು ಬೆಳಿಗ್ಗೆ ೧೧ ಗಂಟೆಗೆ ಟೆಂಡರ್ ಕಂ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಅಬಕಾರಿ ನಿರೀಕ್ಷಕರು, ವೀರಾಜಪೇಟೆ ವಲಯ ಇವರನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.