ಕೂಡಿಗೆ, ಆ. ೩೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸುಮಾರು ೩೮ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಜುಲೈ ಅಂತ್ಯಕ್ಕೆ ವಯೋನಿವೃತ್ತಿ ಹೊಂದಿದ ಸಿ.ಎಂ. ಸುಲೋಚನಾ ಅವರಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಶಿಕ್ಷಕರ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ೩೮ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾದ ಶಿಕ್ಷಕಿ ಸುಲೋಚನ ಅವರ ಸೇವೆಯನ್ನು ಶ್ಲಾಘಿಸಿದರು. ಸನ್ಮಾನಿತರಾದ ಶಿಕ್ಷಕಿ ಸುಲೋಚನ ಮಾತನಾಡಿ, ಶಾಲೆಯಲ್ಲಿ ತಾವು ಎಲ್ಲರ ಸಹಕಾರದೊಂದಿಗೆ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ಅನುಭವ ಹಂಚಿಕೊAಡರು. ಶಾಲಾ ಆಡಳಿತ ಮಂಡಳಿಯ ವ್ಯವಸ್ಥಾಪಕ ಎಂ.ಬಿ. ಮೊಣ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವ ಪಲ್ಲೇದ್, ಪ್ರಬಾರ ಮುಖ್ಯ ಶಿಕ್ಷಕಿ ಎನ್. ಪುಷ್ಪ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಸಂಘದ ವಿಭಾಗೀಯ ಪ್ರತಿನಿಧಿ ನವೀನ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಪದಾಧಿಕಾರಿಗಳು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ, ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್. ಪುಷ್ಪ, ಡಯಟ್‌ನ ನಿವೃತ್ತ ಉಪನ್ಯಾಸಕಿ ಬಿ.ಬಿ. ಸಾವಿತ್ರಿ, ಮಕ್ಕಳ ಸುರಕ್ಷಾ ಸಮಿತಿ ಉಪಾಧ್ಯಕ್ಷ ಮಂಜುನಾಥ, ಪೋಷಕ ಪರಿಷತ್ತಿನ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷ ಮನು, ತಾಲೂಕು ಮುಖ್ಯ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕ ಸೋಮಯ್ಯ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಎಂ.ಎಸ್. ಕುಸುಮ ವಂದಿಸಿದರು.