ಕುಶಾಲನಗರ, ಸೆ. ೧ : ಕುಶಾಲನಗರ ಮಡಿಕೇರಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆಯೊAದು ಬಿದ್ದು ಕಾರಿನಲ್ಲಿದ್ದ ವ್ಯಕ್ತಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ಪಾರಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ.
ಕುಶಾಲನಗರದ ಎಂ. ಕೃಷ್ಣ ಅವರು ಮಡಿಕೇರಿಯಿಂದ ಕುಶಾಲನಗರದ ಕಡೆಗೆ ತಮ್ಮ ಕಾರಿನಲ್ಲಿ (ಏಂ ೧೨P ೭೯೦೫) ಬರುತ್ತಿದ್ದ ಸಂದರ್ಭ ಆನೆಕಾಡು ಅರಣ್ಯದ ಬಳಿ ಮರವೊಂದರ ಬೃಹತ್ ಕೊಂಬೆ ಕಾರಿನ ಮೇಲೆ ಬಿದ್ದಿದ್ದು ಕಾರು ಬಹುತೇಕ ಜಖಂಗೊAಡಿದೆ.
ಕಾರು ಚಾಲನೆ ಮಾಡುತ್ತಿದ್ದ ಕೃಷ್ಣ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಕೆಲವರು ರಕ್ಷಣೆ ಮಾಡಿ ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಾಹಿತಿ ದೊರೆತ ಅರಣ್ಯ ಅಧಿಕಾರಿಗಳು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರವನ್ನು ತೆರವುಗೊಳಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.