ಮೂರ್ನಾಡು, ಸೆ. ೨: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡದ ವಿದ್ಯಾರ್ಥಿನಿ ಯರು ವಿಭಾಗೀಯ ಮಟ್ಟದ ವಾಲಿ ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಮಡಿಕೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾ ಖೆಯ ವತಿಯಿಂದ ಆಯೋಜಸ ಲಾದ ಜಿಲ್ಲಾ ಮಟ್ಟದ ಕ್ರೀಡಾಕೂಟ ದಲ್ಲಿ ಪ್ರಾಥಮಿಕ ಶಾಲೆಯ ೧೪ ವರ್ಷದ ಕೆಳಗಿನ ವಿಭಾಗದ ವಾಲಿ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ವಲಯ ಮಟ್ಟದ ಕ್ರೀಡಾಕೂಟ ದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ಕಾಲ್ಚೆಂಡು ಪಂದ್ಯಾಟದಲ್ಲಿ ಪ್ರಥಮ, ಬಾಲಕರು ಮತ್ತು ಬಾಲಕಿಯರ ಖೊಖೊ ಪಂದ್ಯಾಟದಲ್ಲಿ ಪ್ರಥಮ, ಮೇಲಾಟದಲ್ಲಿ ಬಾಲಕಿಯರ ರಿಲೆ ಪ್ರಥಮ, ಬಾಲಕಿಯರ ೧೦೦ ಮೀಟರ್ ಮತ್ತು ೨೦೦ ಮೀಟರ್ ಓಟದಲ್ಲಿ ಪ್ರಥಮ, ೪೦೦ ಮೀಟರ್ ಓಟದಲ್ಲಿ ದ್ವಿತೀಯ, ಬಾಲಕರ ೨೦೦ ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಬಾಲಕಿಯರ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದು ಚಪ್ಪೆಂಡಡಿ ಸರ್ಕಾರಿ ಪ್ರಾಥಮಿಕ ಶಾಲೆಯು ನಾಪೋಕ್ಲು ವಿನ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ರುತ್ತಾರೆಂದು ದೈಹಿಕ ಶಿಕ್ಷಕಿ ಪ್ರೇಮಲತ ಶೆಡ್ತಿ ತಿಳಿಸಿದ್ದಾರೆ.