ಮಡಿಕೇರಿ, ಸೆ. ೨: ಭಾರತೀಯ ಸೇನೆ-ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ಅಭ್ಯರ್ಥಿಗಳಿಗೆ ೨೦೨೩-೨೪ ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಬಾಲಕರಿಗೆ ಮಾತ್ರ). ಆಸಕ್ತ ಅಭ್ಯರ್ಥಿಗಳು ತಾ. ೧೫ ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧ ಕ್ಕೆ ರೂ. ೨.೫೦ ಲಕ್ಷಗಳು ಹಾಗೂ ಪ್ರವರ್ಗ ೨ (ಎ) , ೩(ಎ) ಮತ್ತು ೩(ಬಿ) ಅಭ್ಯರ್ಥಿಗಳಿಗೆ ರೂ. ೧ ಲಕ್ಷಗಳು, ಅಭ್ಯರ್ಥಿಯು ೧೦ನೇ ತರಗತಿಯಲ್ಲಿ ಉತ್ತೀರ್ಣವಾಗಿದ್ದು, ಪ್ರತೀ ವಿಷಯದಲ್ಲಿ ಕನಿಷ್ಟ ೩೩ ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು (೧೦ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಡಿಸೆಂಬರ್ ೩೧, ೨೦೨೩ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು ೦೧ ಜನವರಿ ೨೦೦೩ ರಿಂದ ಜುಲೈ ೨೦೦೬ (೧೭ ೧/೨ ವರ್ಷದಿಂದ ೨೧ ವರ್ಷ) ರ ದಿನಾಂಕಗಳ ನಡುವೆ ಜನಿಸಿರಬೇಕು. ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಪಡೆಯಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ದಕ್ಷಿಣ ಕನ್ನಡ ಜಿಲ್ಲೆ: ೦೮೨೪-೨೨೨೫೦೭೮, ಉಡುಪಿ ಜಿಲ್ಲೆ: ೦೮೨೦-೨೫೭೪೮೮೧, ಉತ್ತರ ಕನ್ನಡ ಜಿಲ್ಲೆ: ೦೮೩೮೨- ೨೨೬೫೮೯, ಕೇಂದ್ರ ಕಚೇರಿ ೮೦೫೦೭೭೦೦೦೪ (ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.