ಕೂಡಿಗೆ, ಸೆ. ೨: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂz ಜಿಲ್ಲಾ ಮಟ್ಟದಲ್ಲಿ ನಡೆದ ಹ್ಯಾಂಡ್ ಬಾಲ್ ಪಂದ್ಯದಲ್ಲಿ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಯಗಳಿಸಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ವಿಭಾಗ ಮಟ್ಟದ ಕ್ರೀಡಾಕೂಟವು ಮಂಗಳೂರಿನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ತರಬೇತಿಯನ್ನು ಶಿಕ್ಷಕ ದೊಡ್ಡಯ್ಯ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ಮತ್ತು ಶಿಕ್ಷಕ ವೃಂದ ಹಾಗೂ ಪೋಷಕರ ಪರಿಷತ್ತು ಅಭಿನಂದಿಸಿದೆ.