ಕುಶಾಲನಗರ, ಸೆ. ೧: ಕುಶಾಲನಗರ ಪಟ್ಟಣಕ್ಕೆ ಸ್ವಚ್ಛ ಕುಡಿಯುವ ನೀರು ಪೂರೈಸಲು ಸರಕಾರದಿಂದ ರೂ. ೪೦ ಕೋಟಿ ಯೋಜನೆಗೆ ಅನುಮೋದನೆ ದೊರೆತಿದ್ದು ಮುಂದಿನ ಒಂದು ತಿಂಗಳ ಅವಧಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್‌ಗೌಡ ಮಾಹಿತಿ ನೀಡಿದ್ದಾರೆ.

ಕುಶಾಲನಗರದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಡಿಯುವ ನೀರಿಗೆ ಸಂಬAಧಿಸಿದAತೆ ಕುಶಾಲನಗರ ಪುರಸಭೆಯ ಸರ್ವ ಸದಸ್ಯರ ವಿಶೇಷ ಸಭೆಯೊಂದನ್ನು ಕರೆದು ಸ್ಥಳ ಪರಿಶೀಲಿಸಿ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುವುದೆಂದು ತಿಳಿಸಿದರು.

ಮುಳ್ಳುಸೋಗೆ ಗೊಂದಿ ಬಸವನಹಳ್ಳಿ ವ್ಯಾಪ್ತಿಯ ಜನತೆಗೆ ತಕ್ಷಣ ಕುಡಿಯುವ ನೀರು ಒದಗಿಸುವ ಕಾರ್ಯ ಯೋಜನೆ ರೂಪಿಸುವಂತೆ ಶಾಸಕರು ಕುಡಿಯುವ ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಶಾಲನಗರ ಪಟ್ಟಣದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಒಳಚರಂಡಿ ಯೋಜನೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಸೆಪ್ಟೆಂಬರ್ ಅಂತ್ಯದೊಳಗೆ ಯೋಜನೆಯ ಪ್ರಥಮ ಹಂತದ ಕಾಮಗಾರಿ ಮುಗಿಸಿ ಲೋಕಾರ್ಪಣೆಗೊಳಿಸಲಾಗುವುದೆಂದು ಸಭೆಯಲ್ಲಿ ಉಪಸ್ಥಿತರಿದ್ದ ಒಳಚರಂಡಿ ಮಂಡಳಿ ಇಂಜಿನಿಯರ್ ಉಮೇಶ್ಚಂದ್ರ ತಿಳಿಸಿದರು. ತಾ. ೩೦ ಅಂತಿಮ ಗಡುವು ಎಂದು ಶಾಸಕ ಡಾ. ಮಂಥರ್‌ಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕುಶಾಲನಗರ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚನೆ ನೀಡಿದರು.

ಮುಳ್ಳುಸೋಗೆ ಗ್ರಾಮದ ಜನಪ್ರತಿನಿಧಿಗಳ ಉಪಸ್ಥಿತಿ ಇಲ್ಲದಿರುವ ಹಿನ್ನೆಲೆಯಲ್ಲಿ ಗ್ರಾಮದ ಬಗ್ಗೆ ಪುರಸಭೆ ಸದಸ್ಯರು ಮತ್ತು ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದರು. ಪಟ್ಟಣದ ಲೋಕೋಪಯೋಗಿ ರಸ್ತೆಗಳ ಮಾಹಿತಿಗಳನ್ನು ಅಧಿಕಾರಿಗಳಿಂದ ಸಂಗ್ರಹಿಸಿದ ಶಾಸಕ ಡಾ. ಮಂಥರ್‌ಗೌಡ ಸಮರ್ಪಕ ರಸ್ತೆ ಸಂಚಾರ ವ್ಯವಸ್ಥೆ ಸುಸ್ಥಿತಿಯ ರಸ್ತೆ ನಿರ್ಮಾಣ ಮಾಡಬೇಕು. ಮುಂದಿನ ಸಭೆಯಲ್ಲಿ ರಾಷ್ಟಿçÃಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿರಲು ಅಧಿಕಾರಿಗಳಿಗೆ ಮಾಹಿತಿ ನೀಡಬೇಕಾಗಿದೆ ಎಂದರು.

ಕುಶಾಲನಗರ ತಾವರೆಕೆರೆಯ ಅಭಿವೃದ್ಧಿ ಸಂಬAಧ ಕುಶಾಲನಗರ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಮೂಲಕ ಮಾಹಿತಿ ಬಯಸಿದ ಶಾಸಕರು, ಕುಶಾಲನಗರ ಪುರಸಭೆ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಕೆರೆಯ ಅಭಿವೃದ್ಧಿ ಕ್ರಿಯಾಯೋಜನೆ ರೂಪಿಸಬೇಕು ಎಂದರು.

ಕುಶಾಲನಗರ ಪ್ರಾಧಿಕಾರದಲ್ಲಿ ರೂ. ೨ ಕೋಟಿ ಅನುದಾನವನ್ನು ಕೆರೆ ಅಭಿವೃದ್ಧಿಗೆ ಮೀಸಲಿರಿಸಲಾಗಿದೆ ಎಂದು ಸದಸ್ಯ ಕಾರ್ಯದರ್ಶಿ ಸ್ವಾತಿ ಅವರು ಸಭೆಗೆ ಮಾಹಿತಿ ಒದಗಿಸಿದರು. ಬಡಾವಣೆಗಳ ನಿರ್ಮಾಣ ಸಂದರ್ಭ ಕುಶಾಲನಗರ ಪಟ್ಟಣ ಪ್ರಾಧಿಕಾರದ ಮಾಹಿತಿ ಕೊರತೆಯಿಂದ ಪುರಸಭೆಗೆ ನಷ್ಟ ಉಂಟಾಗುತ್ತಿದೆ ಎಂದು ಸದಸ್ಯರಾದ ಸುರೇಶ್, ದಿನೇಶ್, ರೇಣುಕಾ ಮತ್ತಿತರರು ಶಾಸಕರ ಗಮನಕ್ಕೆ ತಂದರು. ಈ ಬಗ್ಗೆ ಪುರಸಭಾ ಆಡಳಿತ ಮಂಡಳಿಯೊAದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಶಾಸಕ ಡಾ. ಮಂಥರ್ ಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಪ ವಿಭಾಗ ಅಧಿಕಾರಿಗಳು ಹಾಗೂ ಕುಶಾಲನಗರ ಪುರಸಭೆಯ ಆಡಳಿತ ಅಧಿಕಾರಿಗಳು ಆಗಿರುವ ಯತೀಶ್ ಉಳ್ಳಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಶಾಲನಗರ ಪುರಸಭೆಯ ಕಚೇರಿ ಕಟ್ಟಡದ ಮುಂದುವರಿದ ಕಾಮಗಾರಿ, ಪುರಸಭೆ ಅನುದಾನದ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ಹಾಗೂ ಆಡಳಿತಾತ್ಮಕ ಮಂಜೂರಾತಿ ನೀಡುವ ಬಗ್ಗೆ, ಕುಶಾಲನಗರ ಪುರಸಭೆಯಲ್ಲಿರುವ ಶ್ರದ್ಧಾಂಜಲಿ ವಾಹನದ ಕೆಲಸ ಕಾರ್ಯದ ಅಂದಾಜು ಮೊತ್ತ ಕ್ರಿಯಾ ಯೋಜನೆಗೆ ಅನುಮೋದನೆ ಸೇರಿದಂತೆ ಅಕ್ಟೋಬರ್ ತಿಂಗಳಲ್ಲಿ ಕಾವೇರಿ ಹಬ್ಬ ಆಚರಣೆ, ಪಟ್ಟಣದ ಕಾವೇರಿ ಬಡಾವಣೆ ವಾಣಿಜ್ಯ ಸಂಕೀರ್ಣದ ನವೀಕರಣ ಮುಂತಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್, ಒಳಚರಂಡಿ ಮಂಡಳಿ, ಲೋಕೋಪಯೋಗಿ, ಸೆಸ್ಕಾಂ ಅಧಿಕಾರಿಗಳು, ಪುರಸಭೆ ಮಾಜಿ ಅಧ್ಯಕ್ಷ ಜಯ ವರ್ಧನ್, ಸದಸ್ಯರಾದ ಪ್ರಮೋದ್ ಮುತ್ತಪ್ಪ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.