ಸೋಮವಾರಪೇಟೆ, ಸೆ. ೨: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಇಲ್ಲಿನ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಒಳಾಂಗಣ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ನಡೆಯಿತು.
ಪಂದ್ಯಾಟವನ್ನು ಮಾದಾಪುರ ಜೂನಿಯರ್ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ರಂಗಸ್ವಾಮಿ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮಕ್ಕಳ ಮಾನಸಿಕ, ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ ಎಂದರು. ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಿಲ್ಪೆçಡ್ ಗೋನ್ಸಾಲ್ವೆಸ್ ಮಾತನಾಡಿ, ಉತ್ತಮವಾದ ಹೃದಯ, ದೇಹ ಬೇಕೆಂದರೆ ಕ್ರೀಡಾಚಟುವಟಿಕೆಯಲ್ಲಿ ಭಾಗವಹಿಸಬೇಕು ಎಂದರು.
ಪAದ್ಯಾಟದಲ್ಲಿ ಸೋಮವಾರಪೇಟೆ, ಕುಶಾಲನಗರ ತಾಲೂಕಿನ ೧೨ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ನಂದಸ್ವಾಮಿ, ನಾಚಪ್ಪ, ಅಭಿಷೇಕ್, ದಿನೇಶ್, ಇಂದಿರಾ ಇದ್ದರು. ಶಿಕ್ಷಕಿಯರಾದ ಸೌಮ್ಯ ನಿರೂಪಿಸಿ, ದಿವ್ಯ ವಂದಿಸಿದರು.