ಮಡಿಕೇರಿ, ಸೆ .೨ :ಕೊಡಗು ಪತ್ರಕರ್ತರ ಸಂಘ ಹಾಗೂ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಘಟಕ ಮತ್ತು ಕೊಡಗು ಪತ್ರಿಕಾಭವನ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ತಾ.೪ ರಂದು (ನಾಳೆ) ಬೆಳಿಗ್ಗೆ ೧೦.೩೦ ಗಂಟೆಗೆ ಪತ್ರಿಕಾ ಭವನದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಜನಮಿತ್ರ ಪತ್ರಿಕೆ ಸಂಪಾದಕ ಸಿ.ಆರ್. ನವೀನ್, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ಟಿ.ಜಿ. ಸತೀಶ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ತಿಳಿಸಿದ್ದಾರೆ.