ಪೊನ್ನಂಪೇಟೆ, ಸೆ. ೨: ಸಾಯಿ ಶಂಕರ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ನವೀನ್ ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ಆಗುವ ದುಷ್ಟರಿಣಾಮಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಠಾಣೆಯ ಸಿಬ್ಬಂದಿಗಳು, ಕಾಲೇಜು, ಪ್ರೌಢಶಾಲೆ ವಿದ್ಯಾರ್ಥಿಗಳು, ಸಂಸ್ಥೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.