ವೀರಾಜಪೇಟೆ, ಸೆ. ೨: ಕೆರೆಯೊಂದರಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿರುವ ಘಟನೆ ವೀರಾಜಪೇಟೆ ಆರ್ಜಿ ಬೇಟೋಳಿ ಗ್ರಾಮದಲ್ಲಿ ನಡೆದಿದೆ.

ಆರ್ಜಿ ಬೇಟೋಳಿ ಗ್ರಾಮದ ನಿವಾಸಿ ಬಿ.ಕೆ. ಬೋಪಣ್ಣ ಅವರಿಗೆ ಸೇರಿದ ಕೆರೆಯಲ್ಲಿ ಅಪರಿಚಿತ ಪುರುಷನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳಿಗ್ಗೆ ಎಂದಿನAತೆ ಬೋಪಣ್ಣ ಅವರ ತಮ್ಮ ಸೋಮಣ್ಣ ಅವರು ತೋಟಕ್ಕೆ ನೀರು ಹಾಯಿಸಲು ಕೆರೆಯ ಭಾಗಕ್ಕೆ ಬಂದಿದ್ದಾರೆ. ಬೆಳಿಗ್ಗೆ ೭ರ ಸಮಯದಲ್ಲಿ ಮೋಟಾರು ಆರಂಭಿಸಲು ತೆರಳಿದ ಸಂದರ್ಭದಲ್ಲಿ ಕೆರೆಯ ಮೇಲ್ಭಾಗದಲ್ಲಿ ವ್ಯಕ್ತಿಯ ಮೃತದೇಹ ಕಂಡುಬAದಿದೆ. ವಿಷಯ ತಿಳಿದು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವೀರಾಜಪೇಟೆ ನಗರ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಆಗಮಿಸಿ ಕೆರೆಯಲ್ಲಿದ್ದ ಮೃತ ದೇಹವನ್ನು ಸಾರ್ವಜನಿಕರ ಸಹಾಯದಿಂದ ಹೊರತೆಗೆದಿದ್ದಾರೆ. ಮೃತ ವ್ಯಕ್ತಿಯ ವಯಸ್ಸು ೫೦ ವರ್ಷ ಎಂದು ಅಂದಾಜಿಸಲಾಗಿದೆ. ಮೂರು ದಿನಗಳ ಹಿಂದೆ ಕೆರೆಗೆ ಬಿದ್ದಿರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ವೀರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. -ಕಿಶೋರ್ ಶೆಟ್ಟಿ