ಬೆಂಗಳೂರು, ಸೆ. ೪: ಬರಪೀಡಿತ ಪ್ರದೇಶಗಳನ್ನು ಗುರುತು ಮಾಡುವ ನಿಟ್ಟಿನಲ್ಲಿ ಜಂಟಿ ಸಮೀಕ್ಷೆ ಕೈಗೊಳ್ಳಲು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಾಜ್ಯ ಸರಕಾರ ನಿರ್ಧರಿಸಿದೆ.
ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪದಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಜರುಗಿದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು.
ರಾಜ್ಯದಲ್ಲಿ ಮಂಗಾರು ದುರ್ಬಲಗೊಂಡು, ಜೂನ್ ತಿಂಗಳಿನಲ್ಲಿ ಶೇ ೫೦ರಷ್ಟು ಮಳೆ ಕೊರತೆಯಾಗಿತ್ತು. ನಂತರ ಜುಲೈ ತಿÀಂಗಳಿನಲ್ಲಿ ಉತ್ತಮವಾಗಿ ಮಳೆಯಾದರೂ ಆಗ ತಿಂಗಳಿನಲ್ಲಿ ಶೇಕಡಾ ೭೩ ರಷ್ಟು ಮಳೆ ಕೊರತೆಯಾಗಿದೆ. ಒಟ್ಟಾರೆ ಪ್ರಸಕ್ತ ಮುಂಗಾರು ಜೂನ್ ೧ ರಿಂದ ಸೆಪ್ಟೆಂಬರ್ ೪ ರವರೆಗೆ ವಾಡಿಕೆಯಾಗಿ ೭೧೧ಮಿ.ಮೀ ಮಳೆಯಾಗಬೇಕಿದ್ದು, ಪ್ರಸ್ತುತ ೫೨೫ ಮಿ.ಮೀ ಮಳೆಯಾಗಿದೆ. ಶೇಕಡಾ ೨೬ರಷ್ಟು ಮಳೆ ಕೊರತೆ ಕಾಣಿಸಿಕೊಂಡು ಬರ ಪರಿಸ್ಥಿತಿ ತಲೆದೋರಿದೆ.