ವಿವಾದ ಹುಟ್ಟಿಸಿದ ಉದಯನಿಧಿ ಹೇಳಿಕೆ

ಚೆನ್ನೆöÊ, ಸೆ. ೪: ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ನಾನು ನನ್ನ ಹೇಳಿಕೆ ಬದ್ಧನಾಗಿದ್ದು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸಲು ನಾನು ಸಿದ್ಧ ಎಂದು ಸವಾಲು ಹಾಕಿದ್ದಾರೆ. ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಬಿಜೆಪಿ ನಾಯಕರಿಗೆ ಮತ್ತೊಂದು ಸವಾಲು ಹಾಕಿದ್ದಾರೆ. ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದ್ದಂತೆ ಬಿಜೆಪಿ ನಾಯಕರು ತಿರುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಉದಯನಿಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದ್ದರು. ಈ ಬೆನ್ನಲ್ಲೇ ಉದಯನಿಧಿ ನನ್ನ ವಿರುದ್ಧ ಬಿಜೆಪಿ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ ಎಂದು ಪ್ರತ್ಯುತ್ತರ ನೀಡಿದ್ದಾರೆ. ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು, ತಮ್ಮ ಪಕ್ಷ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಇತರರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರö್ಯವಿದೆ ಎಂದು ಹೇಳಿದ್ದಾರೆ. ಉದಯನಿಧಿ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕರ ಮೌನವನ್ನು ಬಿಜೆಪಿ ಪ್ರಶ್ನಿಸಿತ್ತು. ವಿರೋಧ ಪಕ್ಷವು ಹಿಂದೂ ಧರ್ಮದ ವಿರುದ್ಧವಾಗಿದೆ ಎಂದು ಆರೋಪಿಸುತ್ತಿದ್ದಂತೆ ಕಾಂಗ್ರೆಸ್ ಈ ಪ್ರತಿಕ್ರಿಯೆ ನೀಡಿದೆ. ಹೇಳಿಕೆಗೆ ಅನೇಕ ಪಕ್ಷಗಳು, ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಮೇಕೆದಾಟು ಯೋಜನೆ ಅನುಮತಿಗೆ ಯಾಕೆ ಒತ್ತಾಯಿಸುತ್ತಿಲ್ಲ : ಡಿ.ಕೆ.ಶಿ.

ಬೆಂಗಳೂರು, ಸೆ. ೪: ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು? ಇವು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರಕಾರವನ್ನು ಯಾಕೆ ಆಗ್ರಹಿಸುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಕಾವೇರಿ ನೀರು ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ. ರಾಜಕಾರಣ ಮಾಡುವುದರಲ್ಲಿ ಪ್ರಯೋಜನ ಇಲ್ಲ. ಕಾವೇರಿ ನದಿ ನೀರಿನ ವಿಚಾರವಾಗಿ ಮಾತನಾಡುತ್ತಿರುವ ಈ ಸಂಘಟನೆಗಳಾಗಲಿ, ಬಿಜೆಪಿ, ಜನತಾ ದಳದ ನಾಯಕರುಗಳಾಗಲಿ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಏಕೆ ಆಗ್ರಹಿಸುತ್ತಿಲ್ಲ? ಪರಿಸರ ಇಲಾಖೆಯಿಂದ ಅನುಮತಿ ಯಾಕೆ ಕೊಡಿಸುತ್ತಿಲ್ಲ? ಈಗ ಹೋರಾಟ ಮಾಡುತ್ತಿರುವವರು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬರ ಪೀಡಿತ ಜಾಗಗಳಿಗೆ ಹಣದ ಬದಲು ೧೦ ಕೆ.ಜಿ

ಬೆಂಗಳೂರು, ಸೆ. ೪: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ೧೦ ಕೆ.ಜಿ. ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ೧೧೪ ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ ೧೦ ಕೆಜಿ ಅಕ್ಕಿ ವಿತರಣೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಬರಪೀಡಿತ ತಾಲೂಕುಗಳಲ್ಲಿ ಐದು ಕೆಜಿ ಅಕ್ಕಿಗೆ ಹಣ ಬದಲು ಅಕ್ಕಿಯನ್ನೇ ಪೂರೈಕೆ ಮಾಡಲಾಗುತ್ತದೆ. ಬರ ಪೀಡಿತ ತಾಲೂಕುಗಳಲ್ಲಿ ಒಟ್ಟು ಹತ್ತು ಕೆಜಿ ಅಕ್ಕಿ ಪೂರೈಕೆ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅಕ್ಕಿ ಖರೀದಿ ವಿಚಾರವಾಗಿ ಮಾತನಾಡಿದ ಸಚಿವ ಕೆ ಎಚ್ ಮುನಿಯಪ್ಪ ಅವರು, ಮುಂದಿನ ಒಂದು ವಾರದಲ್ಲಿ ಅಕ್ಕಿ ಖರೀದಿ ಫೈನಲ್ ಆಗಲಿದೆ. ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್‌ಗಢ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ಕೋಡುವ ಕೆಲಸ ಮಾಡುತ್ತೇವೆ ಎಂದರು.

ಕಾAಗ್ರೆಸ್‌ನೊAದಿಗೆ ವೈಎಸ್‌ಆರ್ ತೆಲಂಗಾಣ ಪಕ್ಷ ವಿಲೀನ?

ನವದೆಹಲಿ, ಸೆ. ೪: ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಮತ್ತು ಶೀಘ್ರದಲ್ಲೇ ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ತಾ. ೧೭ ರಂದು ಹೈದರಾಬಾದ್ ಬಳಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಮೆಗಾ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಗಗನಸಖಿ ಶವ ಪತ್ತೆ

ಮುಂಬೈ, ಸೆ. ೪: ಮುಂಬೈನ ಅಪಾರ್ಟ್ಮೆಂಟ್ ಒಂದರಲ್ಲಿ ಕುತ್ತಿಗೆ ಸೀಳಿದ ೨೪ ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ. ಈ ಸಂಬAಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೃತರನ್ನು ರೂಪಲ್ ಓಗ್ರೆ ಎಂದು ಗುರುತಿಸಲಾಗಿದೆ. ಛತ್ತೀಸ್‌ಗಢ ಮೂಲದವರಾದ ಈಕೆ, ಏರ್ ಇಂಡಿಯಾದಲ್ಲಿ ತರಬೇತಿಗಾಗಿ ಏಪ್ರಿಲ್‌ನಲ್ಲಿ ಮುಂಬೈಗೆ ಬಂದಿದ್ದರು. ಉಪನಗರ ಅಂಧೇರಿಯ ಮರೋಲ್ ಪ್ರದೇಶದ ಕ್ರಿಶನ್‌ಲಾಲ್ ಮರ್ವಾಹ್ ಮಾರ್ಗದಲ್ಲಿರುವ ಎನ್‌ಜಿ ಕಾಂಪ್ಲೆಕ್ಸ್ನಲ್ಲಿರುವ ಫ್ಲಾಟ್‌ನಲ್ಲಿ ಭಾನುವಾರ ತಡರಾತ್ರಿ ಆಕೆ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕುಟುಂಬ ಸದಸ್ಯರ ಫೋನ್ ಕರೆಯನ್ನು ಆಕೆ ಸ್ವೀಕರಿಸದಿದ್ದಾಗ ಮುಂಬೈನಲ್ಲಿರುವ ಆಕೆಯ ಸ್ನೇಹಿತರಿಗೆ ಫೋನ್ ಮಾಡಿದ್ದು, ಅವರು ಫ್ಲಾಟ್‌ಗೆ ಬಂದು ನೋಡಿದಾಗ ಒಳಗಿನಿಂದ ಬೀಗ ಹಾಕಿರುವುದನ್ನು ಕಂಡುಬAದಿದೆ. ನಂತರ, ಅವರು ಪೊವೈ ಪೊಲೀಸರನ್ನು ಸಂಪರ್ಕಿಸಿದ್ದು, ಅವರ ಸಹಾಯದಿಂದ ನಕಲಿ ಕೀ ಬಳಸಿ ಫ್ಲಾಟ್ ಬಾಗಿಲು ತೆರೆದಾಗ ಮಹಿಳೆ ಕುತ್ತಿಗೆ ಸೀಳಿ ಬಿದ್ದಿರುವುದು ಪತ್ತೆಯಾಗಿದೆ.

ಇಮ್ರಾನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆ

ಇಸ್ಲಾಮಾಬಾದ್, ಸೆ. ೪: ರಾಷ್ಟçದ ರಹಸ್ಯಗಳನ್ನು ಬಹಿರಂಗಪಡಿಸಿದ ಪ್ರಕರಣದ ಆರೋಪಿಗಳಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಅಪ್ತ ಶಾ ಮಹಮ್ಮದ್ ಖುರೇಷಿ ಅವರ ಬಂಧನದ ನಂತರದ ಜಾಮೀನು ಅರ್ಜಿಯ ವಿಚಾರಣೆಯನ್ನು ಪಾಕಿಸ್ತಾನ ವಿಶೇಷ ನ್ಯಾಯಾಲಯ ಮುಂದೂಡಿದೆ. ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ನ್ಯಾಯಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಬಳಿಕ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ. ಏಳು ವಿವಿಧ ಪ್ರಕರಣಗಳಲ್ಲಿ ತೆಕ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಸಲ್ಲಿಸಿರುವ ಬಂಧನ ಪೂರ್ವ ಜಾಮೀನು ಪಡೆಯುವ ಅರ್ಜಿಯ ವಿಚಾರಣೆಯನ್ನು ಸೋಮವಾರ ಲಾಹೋರ್ ಹೈಕೋರ್ಟ್ ನಡೆಸಲಿದೆ.