ಮಡಿಕೇರಿ, ಸೆ. ೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ತಾ. ೫ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು, ಶಾಸಕರಾದ ಡಾ.ಮಂಥರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ನಗರಸಭೆ ಅಧ್ಯಕ್ಷೆ ಎನ್.ಪಿ. ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ವರ್ಣಿತ್ ನೇಗಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಕೆ. ಶ್ರೀನಿವಾಸ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎ.ಯೋಗೇಶ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಪಿ.ನವೀನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಸೌಮ್ಯ ಪೊನ್ನಪ್ಪ, ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಎಂ. ಚಂದ್ರಕಾAತ್, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ. ದೊಡ್ಡೇಗೌಡ ಇತರರು ಪಾಲ್ಗೊಳ್ಳಲಿದ್ದಾರೆ.