ಕಡಂಗ, ಸೆ. ೫: ಇಲ್ಲಿಯ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡು ತ್ತಿರುವ ವಿದ್ಯಾರ್ಥಿಗಳಿಗೆ ಬೆಂಗ ಳೂರಿನ ಕೇಮ್ವೆಲ್ ಬಯೋ ಫಾರ್ಮಾ ಸಂಸ್ಥೆ ವತಿಯಿಂದ ಉಚಿತ ಬ್ಯಾಗ್, ನೋಟ್ ಪುಸ್ತಕ ಇನ್ನಿತರ ವಸ್ತುಗಳನ್ನು ಸಂಸ್ಥೆಯ ಉಪಾಧ್ಯಕ್ಷ ರಾದ ಮಾಳೆಯಂಡ ಪ್ರಕಾಶ್ ನಾಣಯ್ಯ ವಿತರಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಶಾಲಾ ಸ್ಥಳದಾನಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.